Home Crime News ಜೆಸಿಬಿ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ
Crime NewsHomeLatest Newsnamma chikmagalurTarikere

ಜೆಸಿಬಿ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ

Share
Share

ತರೀಕೆರೆ: ನಂದಿಬಟ್ಟಲು ಗ್ರಾಮದ ಕೆರೆಯನ್ನು ಮೂರು ವರ್ಷಗಳ ಅವಧಿಗೆ ಗುತ್ತಿಗೆಗೆ ಪಡೆದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದ ರಂಗನಾಥ್ ಎಂಬುವವರ ಕೆರೆಯ ನೀರನ್ನು ಜೆಸಿಬಿ ಮೂಲಕ ಗೊಂದಲಗೊಳಿಸಿ ಮೀನುಗಳು ಸಾಯುವಂತೆ ಮಾಡಿ ನಷ್ಟ ಉಂಟುಮಾಡಿದ ಘಟನೆ ಲಿಂಗದಹಳ್ಳಿಯಲ್ಲಿ ನಡೆದಿದೆ.

ಈ ನಷ್ಟದ ಕುರಿತು ಕೆರೆಯ ಬಳಿ ಹೋದ ರಂಗನಾಥ್ ಅವರ ಪತ್ನಿ ರೂಪ ಅವರು ಜೆಸಿಬಿ ಚಾಲಕ ವಿಜಿ ಅಲಿಯಾಸ್ ಜಯಣ್ಣ ಎಂಬುವವರನ್ನು ಪ್ರಶ್ನಿಸಿದಾಗ, ಆತ ಮಹಿಳೆಗೆ ಅವಾಚ್ಯವಾಗಿ ನಿಂದಿಸಿ ತಲೆಕೂದಲು ಹಿಡಿದು ಎಳೆದಾಡಿ, ಕಪಾಳಕ್ಕೆ ಹೊಡೆದು ಕುತ್ತಿಗೆ ಹಿಸುಕಿ ಮತ್ತೊಮ್ಮೆ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹಲ್ಲೆಯಿಂದ ಗಾಯಗೊಂಡ ರೂಪ ಅವರು ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಂಪ್ಯೂಟ‌ರ್ ಮುದ್ರಿತ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Woman attacked to death by JCB driver

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...