ಚಿಕ್ಕಮಗಳೂರು: ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ ೨೦ ಸಾವಿರದಿಂದ ೫೦,೦೦೦ ದವರೆಗೆ ದಂಡವನ್ನು ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ಸಿಂಗ್ ಮೀನಾ ಹೇಳಿ ದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಐಎಲ್ಓ ಸಂಸ್ಥೆ, ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಬಾಲಕಾರ್ಮಿಕ ವಿರೋಧಿ ನಿರ್ಮೂಲನೆ ಕುರಿತ ಅನುಷ್ಟಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪ್ರತಿಯೊಬ್ಬರಿಗೂ ೧೪ ವರ್ಷದವರೆಗೆ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಆದರೆ ಮಕ್ಕಳನ್ನು ಶಾಲೆಗೆ ಕಳುಹಿಸದೇ ಗ್ಯಾರೇಜು, ಖಾಸಗಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಉಪಯೋಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಬಾಲಕಾರ್ಮಿಕರ ರಕ್ಷಣೆಗಾಗಿ ಜಗತ್ತಿನ ಗಮನ ಸೆಳೆಯಲು ವಿಶ್ವಕಾರ್ಮಿಕ ಸಂಘಟನೆಯು ಜೂ.೧೨ ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಘೋ ಷಿಸಿತು. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರ ಬಂದು ಹಕ್ಕುಗಳ ಕುರಿತು ಜಾಗೃತಿ ಹೊಂ ದಿ ಉತ್ತಮ ವಿದ್ಯಾವಂತರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಐಎಲ್ಓ ಕೋ-ಆರ್ಡಿನೇಟರ್ ರಂಜಿತ್ಪ್ರಕಾಶ್ ಮಾತನಾಡಿ ಹಲವಾರು ದೇಶಗಳಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ರಾಜ್ಯ ಸರ್ಕಾರದೊಂದಿಗೆ ಇಂಥಹ ಉಪಕ್ರಮಕ್ಕಾಗಿ ಪಾಲುದಾರಿಕೆ ಮಾಡಿಕೊಂಡಿರುವುದು ಇದೇ ಮೊದಲು ಎಂದರು.
ಇದು ಮೂರು ವರ್ಷಗಳ ಯೋಜನೆಯಾಗಿದ್ದು ಕೃಷಿಯಲ್ಲಿ ದುಡಿಯುತ್ತಿರುವ ಬಾಲ ಕಾರ್ಮಿಕರನ್ನು ಗುರುತಿಸಿ ಇದಕ್ಕೆ ಪರಿಹಾರ ಕಂಡುಹಿಡಿಯುವುದು ಮುಖ್ಯ ಉದ್ದೇಶವಾಗಿದೆ. ಯೋಜನೆಯ ಫಲಿತಾಂಶಗಳು ಇತರೆ ರಾಜ್ಯ ಮತ್ತು ಏಷ್ಯಾ ದೇಶಗಳು ಇದೇ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದರು.
ಈ ಯೋಜನೆಯಡಿ ರಾಜ್ಯದಲ್ಲಿ ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ರಾಯಚೂರು, ಮಡಿಕೇರಿ ಜಿಲ್ಲೆಗಳನ್ನು ಆಯ್ಕೆ ಆಯ್ಕೆ ಮಾಡಲಾಗಿದೆ. ಈ ಯೋಜನೆಯು ಮುಖ್ಯವಾಗಿ ಕಬ್ಬು, ಹತ್ತಿ ಮತ್ತು ಕಾಫಿಯಂಥಹ ಬೆಳೆಗಳ ಮೇಲೆ ಕೇಂದ್ರೀಕೃತವಾಗಿದ್ದು ಅಲ್ಲಿ ಬಾಲ ಕಾರ್ಮಿಕರ ಬಳಕೆ ಹೆಚ್ಚಾಗಿದೆ ಎಂಬ ವರದಿಯಾಗಿದೆ ಎಂದು ಹೇಳಿದರು.
ಐಎಲ್ಓ ತಂಡವು ಯೋಜನೆಯ ಭಾಗವಾಗಿ ಕ್ಷೇತ್ರ ಸಮೀಕ್ಷೆಗಳನ್ನು ನಡೆಸುತ್ತಿದೆ ಮತ್ತು ಈ ಜಿಲ್ಲೆಗಳಲ್ಲಿ ಬಾಲಕಾರ್ಮಿಕ ಪದ್ಧತಿಯ ವ್ಯಾಪಕತೆಗೆ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಪಾಲುದಾರರು, ಕಾರ್ಮಿಕರು ಮತ್ತು ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂವಹನ ನಡೆಸಲಿದೆ ಎಂದು ತಿಳಿಸಿದರು.
ಪ್ರಸ್ತುತ ಯೋಜನೆಯ ಅವಧಿ ಮೂರು ವರ್ಷಗಳಾಗಿದ್ದು, ಆವರ್ತಕ ಮೌಲ್ಯಮಾಪನಗಳನ್ನು ನಡೆಸಲಾಗುತ್ತದೆ. ಮತ್ತು ಪ್ರಕ್ರಿಯೆಯ ಉದ್ದಕ್ಕೂ ಸೂಕ್ತವಾದ ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಮಾಹಿತಿ ನೀಡಿದರು. ಬಳಿಕ ತಾಲ್ಲೂಕಿನ ಮೈಲಿಮನೆ ಟಾಟಾ ಕಾಫಿ ಎಸ್ಟೇಟ್ಗೆ ತೆರಳಿ ಕಾರ್ಮಿಕರನ್ನು ಭೇಟಿ ಮಾಡಿ ವೃತ್ತಿಯ ಬಗ್ಗೆ ಕಾರ್ಮಿಕ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಕಾರ್ಮಿಕ ಅಧಿಕಾರಿ ಸುರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಮಿತ್ರ, ಸಹಾಯಕ ಕಾರ್ಮಿಕ ಆಯುಕ್ತ ಸುಭಾಸ್ ಎಂ.ಆಲದಕಟ್ಟಿ, ವಿಕಸನ ಸಂಸ್ಥೆ ಸಿಬ್ಬಂದಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಮುಂತಾದವರು ಉಪಸ್ಥಿತರಿದ್ದರು.
Employing child labor is a punishable offense.
Leave a comment