Home namma chikmagalur chikamagalur ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಕನ್ನೇರಿ ಸ್ವಾಮೀಜಿ ವಿರುದ್ಧ ಆಕ್ರೋಶ
chikamagalurHomeLatest Newsnamma chikmagalur

ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಕನ್ನೇರಿ ಸ್ವಾಮೀಜಿ ವಿರುದ್ಧ ಆಕ್ರೋಶ

Share
Share

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕನ್ನೇರಿ ಸ್ವಾಮೀಜಿ ವಿರುದ್ಧ ನಿವೃತ್ತ ಉಪನ್ಯಾಸಕರೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

​ಸ್ವಾಮೀಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿವೃತ್ತ ಉಪನ್ಯಾಸಕರು, “ಅವನಿಗೆ ಗೋ ಬ್ಯಾಕ್ ಎನ್ನಬೇಕಿತ್ತು, ಆದರೆ ಆತ ನನಗೆ ಸಿಗಲಿಲ್ಲ. ಬಸವಣ್ಣನ ಅನುಯಾಯಿಗಳು ಇರುವ ಈ ಜಾಗಕ್ಕೆ ಬರಲು ಅವನಿಗೆ ಯಾವುದೇ ಅಧಿಕಾರವಿಲ್ಲ” ಎಂದು ಕಿಡಿಕಾರಿದರು.

​”ಇಲ್ಲಿಗೆ ಅವರು ಬಂದಿರುವುದು ಧರ್ಮವನ್ನು ಒಡೆಯುವ ಅಪಪ್ರಚಾರ ಮಾಡಲು. ಲಿಂಗ ಧರಿಸಿರುವವರನ್ನು ದಾರಿ ತಪ್ಪಿಸಲು ಮತ್ತು ಧರ್ಮ ಸೀಳಲು ಬಂದಿದ್ದಾರೆ. ಯಾವುದೋ ಸಂಘಟನೆಗೆ ಗುಲಾಮರಾಗಿರುವ ಇವರನ್ನು ಕೋಟಿ-ಕೋಟಿ ಹಣ ಕೊಟ್ಟು ಬುಕ್ ಮಾಡಲಾಗಿದೆ. ಇಂತಹ ಗುಲಾಮರು ನಮ್ಮ ಗುರುಗಳನ್ನು ನಿಂದಿಸುವುದು ಎಷ್ಟು ಸರಿ?” ಎಂದು ಅವರು ಪ್ರಶ್ನಿಸಿದರು.

​ವಿಶ್ವಗುರು ಬಸವಣ್ಣನವರಿಗೆ ಮತ್ತು ಅವರ ಅನುಯಾಯಿಗಳಿಗೆ ಸ್ವಾಮೀಜಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಅವರು, “ನಮ್ಮನ್ನು ತಾಲಿಬಾನಿಗಳು ಎಂದು ಕರೆದಿದ್ದಾರೆ. ಖಾವಿ ಧರಿಸಿದವರ ಬಾಯಲ್ಲಿ ಇಂತಹ ಕೆಟ್ಟ ಮಾತುಗಳು ಬರಬಾರದು” ಎಂದು ತೀವ್ರ ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದರು.

​ನಗರದ ಕುವೆಂಪು ಕಲಾಮಂದಿರದಲ್ಲಿ ಕೃಷಿ ಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದ್ದು, ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Outrage against Kanneri Swamiji at special agriculture awareness program

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...