Home namma chikmagalur chikamagalur ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು
chikamagalurHomeLatest Newsnamma chikmagalur

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

Share
Share

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ಸಾವಯವ ರೈತರ ಬಳಗದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಸಾವಯವ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ ಕೃಷಿ ಬೇಕಾದ ತನ್ನದೇ ಆದ ಪೋಷಕಾಂಶಗಳನ್ನು ಮಣ್ಣು ಹೊಂದಿತ್ತು. ಪ್ರಾಣಿ, ಪಕ್ಷಿಗಳು ಮತ್ತು ಜಾನುವಾರುಗಳ ಕೃಷಿಯ ಅವಿಭಾಜ್ಯ ಅಂಗವಾಗಿದ್ದವು. ಈಗ ಅವುಗಳಿಂದ ರೈತರು ಕ್ರಮೇಣ ದೂರವಾಗುತ್ತಿದ್ದಾರೆ. ಮಣ್ಣನ್ನು ಪೋಷಣೆ ಮಾಡುವ ಬದಲು ಶೋಷಣೆ ಮಾಡಲಾಗುತ್ತಿದೆ. ರಾಸಾಯನಿಕ ಗೊಬ್ಬರ ಬಳಕೆ ಹೆಚ್ಚಳದಿಂದ ಮಣ್ಣು ರೋಗಯುಕ್ತವಾಗಿದೆ. ಅದನ್ನು ಮತ್ತೆ ಆರೋಗ್ಯಯುಕ್ತ ಮಾಡಬೇಕಾಗಿದೆ ಎಂದರು.

ಸಾವಯವ ಕೃಷಿಯಲ್ಲಿ ಮಣ್ಣು, ಗೊಬ್ಬರ, ನೀರು ಮತ್ತು ಜೀವಾಣುಗಳು ಸದೃಢವಾಗಿದ್ದರೆ ಬೆಳೆ ಸಮೃದ್ದವಾಗಿ ಬರಲಿದೆ. ರಾಸಾಯನಿಕದಿಂದ ಬರಡಾಗಿರುವ ಮಣ್ಣಿಗೆ ಮತ್ತೊಂದು ಬಾರಿ ಜೀವ ತುಂಬುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮೊದಲನೆಯದಾಗಿ ಮಣ್ಣಿಗೆ ಉಪಚಾರ ಮಾಡುವ ಅಗತ್ಯವಿದ್ದು, ಬೆಳೆಗೆ ಉಪಚಾರ ಮಾಡಿ ಪ್ರಯೋಜನವಿಲ್ಲ. ಮಣ್ಣಿಗೆ ಬೇಕಾದ ಜೀವಾಣುಗಳನ್ನು ಹೆಚ್ಚಿಸುವ ಕೆಲಸ ಆಗಬೇಕಿದೆ. ಆ ಮೂಲಕ ಬಡವಾಗಿರುವ ಮಣ್ಣನ್ನು ಮತ್ತೆ ಸಿರಿವಂತಗೊಳಿಸಬೇಕಾಗಿದೆ ಎಂದರು.

ರೈತರೇ ತಯಾರಿಸಬಹುದಾದ ರಂಜಕ, ಯೂರಿಯಾ, ಪೊಟ್ಯಾಷಿಯಂ, ಗಂಧಕ, ಸಾರಜನಕದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಾಮೀಜಿ ವಿವರಿಸಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠದ ನಿಶ್ಚಲಾನಂದನಾಥಸ್ವಾಮೀಜಿ ಮಾತನಾಡಿ, ‘ರಾಸಾಯನಿಕ ಗೊಬ್ಬರ ಬಳಕೆಯಿಂದ ಆಗುತ್ತಿರುವ ಅನಾಹುತಗಳನ್ನು ರೈತರು ನಿಧಾನಕ್ಕೆ ಅರಿಯುತ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರು ಸಾವಯವ ಕೃಷಿ ಕಡೆ ಹೊರಳುತ್ತಿದ್ದಾರೆ. ಸಾವಯವ ಕೃಷಿಯಿಂದ ಉತ್ಪಾದನಾ ವೆಚ್ಚ ಕಡಿಮೆಯಾಗಲಿದ್ದು, ಗುಣಮಟ್ಟದ ಆಹಾರ ಉತ್ಪಾದನೆ ಸಾಧ್ಯ. ಇದಕ್ಕೆ ಪೂರಕವಾಗಿ 300 ದೇಶಿಯ ಹಸುಗಳನ್ನು ಹಾಸನ, ಮಂಡ್ಯ ಜಿಲ್ಲೆಯ ರೈತರಿಗೆ ಮಠದಿಂದ ನೀಡಲಾಗಿದೆ’ ಎಂದು ಹೇಳಿದರು.

ಸಾವಯವ ರೈತರ ಬಳಗದ ಚಂದ್ರಶೇಖರ ನಾರಣಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಮಂಜೇಗೌಡ, ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್‌, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್ ಭಾಗವಹಿಸಿದ್ದರು.

It is essential to maintain soil fertility which increases microbial activity.

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...