Home namma chikmagalur chikamagalur ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ
chikamagalurHomeLatest Newsnamma chikmagalur

ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

Share
Share

ಅಲ್ಲೂರು: ಬಸರವಳ್ಳಿ ಗ್ರಾಮದ ಮಂಜುನಾಥ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಮನೆಯಲ್ಲಿ ಕೂಲಿ ಕೆಲಸಕ್ಕೆ ಸೇರಿದ್ದ ಅಪರಿಚಿತ ವ್ಯಕ್ತಿಯು, ಮನೆಯಲ್ಲಿ ಯಾರೂ ಇಲ್ಲದ ವೇಳೆ 86 ಗ್ರಾಂ ತೂಕದ ಮಾಂಗಲ್ಯ ಸರ, ಎರಡು ಚಿನ್ನದ ಬಳೆಗಳು ಹಾಗೂ ಕೈ ಚೈನ್‌ ಕಳವು ಮಾಡಿ ಪರಾರಿಯಾಗಿದ್ದ. ಈ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪ್ರಕರಣ ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಹಾಗೂ ಉಪ ಪೊಲೀಸ್ ಅಧೀಕ್ಷಕ ನಾಗರಾಜ್ ಕೆ.ಆರ್. ಅವರ ಮಾರ್ಗದರ್ಶನದಲ್ಲಿ, ಆಲ್ಲೂರು ವೃತ್ತ ನಿರೀಕ್ಷಕ ಪಿ.ಪಿ. ಸೋಮೇಗೌಡ ನೇತೃತ್ವದ ತಂಡ 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಕಳುವಾಗಿದ್ದ ₹12.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವೃತ್ತ ನಿರೀಕ್ಷಕ ಸೋಮೇಗೌಡ, ‘ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಅಪರಿಚಿತ ವ್ಯಕ್ತಿಯಾಗಿದ್ದಾನೆ. ಕಾಫಿ ಬೆಳೆಗಾರರು ತಮ್ಮ ತೋಟ ಹಾಗೂ ಮನೆ ಕೆಲಸಗಳಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳುವಾಗ ಅವರ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.

ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ಪೊಲೀಸ್ ಠಾಣೆಯ ಮೂಲಕ ಮಾಹಿತಿ ದೃಢಪಡಿಸಿಕೊಂಡ ಬಳಿಕವೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಸೂಕ್ತ. ಅಪರಿಚಿತ ವ್ಯಕ್ತಿಗಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವಾಗ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಧ್ಯಮಗಳ ಮೂಲಕ ಹಾಗೂ ಇಲಾಖೆಯಿಂದ ಹಲವಾರು ಬಾರಿ ಜಾಗೃತಿ ಮೂಡಿಸಲಾಗಿದೆ. ಆದರೂ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಆತಂಕಕಾರಿ. ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಮಾಡಿದರು.

ಪೊಲೀಸ್‌ ಕಾರ್ಯಾಚರಣೆ ತಂಡದಲ್ಲಿ ಪಿಎಸ್‌ಐಗಳಾದ ಮೂರ್ತಪ್ಪ ಮತ್ತು ರವಿ ಜಿ.ಎ., ಸಿಬ್ಬಂದಿಗಳಾದ ಚೇತನ್ ಕುಮಾರ್, ವಸಂತ್ ಕುಮಾರ್, ಪ್ರಸನ್ನ ಕುಮಾರ್, ತನ್ನೀರ್, ಚೇತನ್ ಬಿ.ಎಲ್. ಹಾಗೂ ಮನು ಇದ್ದರು.

Theft accused arrested – gold ornaments worth ₹12.50 lakh seized

Share

Leave a comment

Leave a Reply

Your email address will not be published. Required fields are marked *

Don't Miss

ಅಪ್ರಾಪ್ತೆ ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು:  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ ಟಿಎಸ್ ಸಿ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 25...

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತೋಟ ಹಾಗೂ ಮನೆಯ ಕೆಲಸಗಾರನಾಗಿ ಸುಮಾರು ಎರಡು ವರ್ಷಗಳಿಂದ ನಂಬಿಕಸ್ಥನಾಗಿದ್ದ ವ್ಯಕ್ತಿಯೊಬ್ಬನೇ ಮಾಲೀಕರ ಮನೆಯ ಲಾಕರ್‌ನಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು...

Related Articles

ಪ್ರಾಣೇಶ್ ರಾಜಕೀಯ ಪೌರಷ ಕಟ್-ಉಪ ಸಭಾಪತಿ ಸ್ಥಾನ ಔಟ್?

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನದಿಂದ ಪ್ರಾಣೇಶ್ ಅನಿವಾರ್ಯವಾಗಿ ಇಳಿಯಬೇಕಾಗಿದೆ. ಪ್ರಾಣೇಶ್ ಗೆ ಉಪ ಸಭಾಪತಿ ಸ್ಥಾನ...

ಪ್ರತ್ಯೇಕ ರೈತ ಸಂಘಟನೆ ಘೋಷಣೆಗೆ ನಿರ್ಧಾರ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ರೈತ ಸಂಘದಲ್ಲಿ ಸಕ್ರೀಯರಾಗಿದ್ದ...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು...