Home namma chikmagalur chikamagalur ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?
chikamagalurHomeLatest Newsnamma chikmagalur

ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?

Share
Oplus_131072
Share

ಮೂಡಿಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಹಾಗೂ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮೂಡಿಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಖರ್ಗೆ ಅವರಿಗೆ ಅವರ ಜವಾಬ್ದಾರಿಯ ಪಾಠವನ್ನು ನೆನಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರ ಸಿಕ್ಕ ಕೆಲವೇ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ಆರ್.ಎಸ್.ಎಸ್. ರಿಜಿಸ್ಟ್ರೇಷನ್ ಹಾಗೂ ಲೆಕ್ಕದ ವಿಚಾರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುತಾಲಿಕ್ ಆರೋಪಿಸಿದರು.

ನೀವು ಕರ್ನಾಟಕದ ಏಳು ಕೋಟಿ ಜನರಿಗೆ ಸಚಿವರಾಗಿದ್ದೀರಿ, ಆದರೆ ಆರ್.ಎಸ್.ಎಸ್. ದೇಶದ 140 ಕೋಟಿ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ನೆನಪಿಸಿದ ಅವರು, ನೂರು ವರ್ಷಗಳಿಂದ ಬೆಳೆದು ನಿಂತಿರುವ ಆನೆಯಂತಹ ಸಂಘಟನೆಯ ಮುಂದೆ ನಿಂತು ನೀವು ಹೀಗೆ ಮಾಡು, ಹಾಗೆ ಮಾಡು ಎಂದು ಹೇಳಲು ನೀವ್ಯಾರು ಎಂದು ಪ್ರಶ್ನಿಸಿದ್ದಾರೆ.

ಆರ್.ಎಸ್.ಎಸ್. ಒಂದು ಅಂತಾರಾಷ್ಟ್ರೀಯ ಸಂಘಟನೆಯಾಗಿದ್ದು, ವಿಶ್ವದ ಸುಮಾರು 140 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಅನಾಥಶ್ರಮಗಳು, ಶಾಲೆಗಳು ಹಾಗೂ ಗೋಶಾಲೆಗಳ ಮೂಲಕ ನಿರಂತರವಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಸಂಘವು ಎಲ್ಲೂ ನೋಂದಣಿ ಆಗಿಲ್ಲ ಮತ್ತು ಅದನ್ನು ಮಾಡುವ ಅಗತ್ಯವೂ ಇಲ್ಲ, ಇದರಿಂದ ನಿಮಗೇನು ತೊಂದರೆ ಎಂದು ಮುತಾಲಿಕ್ ಖಾರವಾಗಿ ಪ್ರಶ್ನಿಸಿದರು.

ಆರ್.ಎಸ್.ಎಸ್. ಎಲ್ಲಾದರೂ ಕಾನೂನು ಬಾಹಿರ ಅಥವಾ ದೇಶದ್ರೋಹದ ಚಟುವಟಿಕೆಗಳನ್ನು ನಡೆಸುತ್ತಿದೆಯೇ ಎಂಬುದಕ್ಕೆ ಸಚಿವ ಖರ್ಗೆ ಒಂದೇ ಒಂದು ಉದಾಹರಣೆ ನೀಡಲಿ ಎಂದು ಸವಾಲು ಹಾಕಿದ ಮುತಾಲಿಕ್, ಸಂಘಟನೆಯು ಶುದ್ಧ, ಶಾಂತ ಹಾಗೂ ಶಿಸ್ತುಬದ್ಧವಾದ ಸ್ವದೇಶಿ ಚಳುವಳಿಯ ಮೂಲಕ ದೇಶಭಕ್ತಿಯನ್ನು ನಿರ್ಮಿಸುತ್ತಿದೆ ಎಂದರು.

ಸಚಿವರ ಇಂತಹ ಟೀಕೆಗಳು ಮತ್ತು ಬೇಡಿಕೆಗಳು ಅತ್ಯಂತ ಅಸಹ್ಯವಾಗಿದ್ದು, ಪ್ರತಿಯೊಬ್ಬರಿಗೂ ಒಂದು ಮಿತಿ ಇರುತ್ತದೆ ಎಂಬುದನ್ನು ಅರಿತು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸುವುದು ಒಳಿತು ಎಂದು ಅವರು ಮೂಡಿಗೆರೆಯಲ್ಲಿ ಕಿಡಿಕಾರಿದ್ದಾರೆ.

RSS Who are you to hold accountable?

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...