Home namma chikmagalur chikamagalur ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ
chikamagalurHomeLatest Newsnamma chikmagalur

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

Share
Share

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು.

ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ ನಗರದ ಬಡಮಕಾನ್ ಮಸೀದಿಯಿಂದ ಆಜಾದ್ ಪಾರ್ಕ್ ವೃತ್ತದ ತನಕ ಕಪ್ಪುಬಟ್ಟೆ ಧರಿಸಿ ಶೋಕದೊಂದಿಗೆ ಮೆರವಣಿಗೆ ನಡೆಸಿದರು.

ತಮಿಳು ಕಾಲೊನಿ, ಷರೀಪ್ ಗಲ್ಲಿ ಸಹಿತ ವಿವಿಧೆಡೆಗಳಲ್ಲಿ ಪಂಜಾ ಮೆರವಣಿಗೆ ನೆರವೇರಿತು. ನೆರೆದಿದ್ದ ಜನ ಪಂಜಾಗೆ ಪ್ರಾರ್ಥನೆ ಸಲ್ಲಿಸಿದರು. ನಗರದ ಹಲವೆಡೆ ಭಕ್ತರಿಗೆ ಪಾನಕ ವ್ಯವಸ್ಥೆ ಮಾಡಲಾಗಿತ್ತು.

ನರಸಿಂಹರಾಜಪುರ ತಾಲ್ಲೂಕಿನಾದ್ಯಂತ ಹಿಂದೂ-ಮುಸ್ಲಿಂ ಭಾವೈಕ್ಯದ ಸಂಕೇತವಾದ ಮೊಹರಂ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಮೊಹರಂ ಹಬ್ಬದ ಪ್ರಯುಕ್ತ ಪಟ್ಟಣದ ಗುರುಭವನದ ಸಮೀಪ ಹಾಗೂ ಪ್ರವಾಸಿಮಂದಿರದ ವೃತ್ತದ ಸಮೀಪ ಎರಡು ಕಡೆ ಅಲಾಬಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು.

ಗುರುವಾರ ರಾತ್ರಿ ಭಕ್ತರು ಸಕ್ಕರೆ, ಉದುಬತ್ತಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಇಷ್ಟಾರ್ಥಗಳು ಈಡೇರಿದವರು ಬೆಳ್ಳಿಯ ಪರಿಕರಗಳನ್ನು ನೀಡಿ ಹರಕೆ ತೀರಿಸಿದರು.

ಇಷ್ಟಾರ್ಥಗಳ ಈಡೇರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ಅಲಾಬಿ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ನಂತರ ಕೆಂಡಾರ್ಚನೆ ನಡೆಯಿತು.

Muharram festival celebrated across the district

Share

Leave a comment

Leave a Reply

Your email address will not be published. Required fields are marked *

Don't Miss

ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ಮಹಿಳೆ ನಾಪತ್ತೆ

ಕಡೂರು: ಕೋರ್ಟ್ ವಿಚಾರಣೆಗಾಗಿ ಚಿಕ್ಕಮಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬರು ಮನೆಯಲ್ಲಿದ್ದ ನೂರಾರು ಗ್ರಾಂ ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಆಘಾತಕಾರಿ...

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ. ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ...

Related Articles

ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ

ಕಡೂರು :  ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು...

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ...