Home namma chikmagalur chikamagalur ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದ ಘಟನೆ ನಡೆದಿದೆ.

ಜೂನ್ 25 ರಂದು ಸಂಜೆ ಗಸ್ತು ಕರ್ತವ್ಯದಲ್ಲಿದ್ದ ಎ.ಎಸ್.ಐ ಅವರು ಜೀಪ್ ತೆರವುಗೊಳಿಸುವಂತೆ ಸೂಚಿಸಿದಾಗ ಕೆರಳಿದ ಆರೋಪಿಗಳು, ಸಮವಸ್ತ್ರ ಹಿಡಿದು ಎಳೆದಾಡಿ ಕೆಳಗೆ ತಳ್ಳಿ ಅವಾಚ್ಯವಾಗಿ ನಿಂದಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪಿ.ಎಸ್.ಐ ಸುನಿತಾ ಮತ್ತು ಸಿಬ್ಬಂದಿ ವರ್ಗದವರು ಉಪ್ಪಳ್ಳಿಯ ಮಣಿಕಂಠ ಮತ್ತು ಅಂಬಳೆ ಹೋಬಳಿಯ ಪ್ರಜ್ವಲ್ ಎಂಬುವವರನ್ನು ಬಂಧಿಸಿದ್ದಾರೆ.

ರಿಜಿಸ್ಟ್ರೇಷನ್ ಆಗದ ಹೊಸ ಥಾರ್ ಜೀಪನ್ನು ವಶಪಡಿಸಿಕೊಳ್ಳಲಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ASI attacked near district playground

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು ವರ್ಷಗಳಿಂದ ಭೂಮಿ ಹಾಗೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರು, ಕಾರ್ಮಿಕರು, ದಲಿತರು ಹಾಗೂ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು...

Related Articles

ಗಂಜಿ ಗಿರಾಕಿಗಳ ಅಟ್ಟಾಹಾಸಕ್ಕೆ ವೀರೇಂದ್ರ ಬಲಿಪಶು ??

ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು...

ಎಸ್‌ಐಆರ್‌ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ...

ಸೌಜನ್ಯ ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಬೇಕು.

ಚಿಕ್ಕಮಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಎಸ್‌ಐಟಿ ರಚಿಸಿ ತನಿಖೆಯನ್ನು ಕಾಲಮಿತಿಲ್ಲಿ ಪೂರ್ಣಗೊಳಿಸಬೇಕು....

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು...