Home namma chikmagalur chikamagalur ಮುಳ್ಳಯ್ಯನಗಿರಿ ಬಳಿ ಟ್ರಾಫಿಕ್ ಜಾಮ್
chikamagalurHomeLatest Newsnamma chikmagalur

ಮುಳ್ಳಯ್ಯನಗಿರಿ ಬಳಿ ಟ್ರಾಫಿಕ್ ಜಾಮ್

Share
Share

ಚಿಕ್ಕಮಗಳೂರು: ಮೂರು ದಿನಗಳ ಸತತ ರಜೆಯ ಹಿನ್ನೆಲೆಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಪ್ರವಾಸಿಗರು ಕಾಫಿನಾಡು ಚಿಕ್ಕಮಗಳೂರಿನತ್ತ ಸಾಗರೋಪಾದಿಯಲ್ಲಿ ಹರಿದುಬಂದಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಗಾಳಿಕೆರೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದು, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ವಿಪರೀತ ಜನಜಾತ್ರೆ ಸೃಷ್ಟಿಯಾಗಿದೆ. ಆದರೆ, ವಿಕೇಂಡ್ ಮೂಡ್‌ನಲ್ಲಿ ಗಿರಿಭಾಗ ವೀಕ್ಷಿಸಲು ಬಂದ ಸಹಸ್ರಾರು ಜನರಿಗೆ ಭಾರಿ ಟ್ರಾಫಿಕ್ ಜಾಮ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಗಿರಿಭಾಗಕ್ಕೆ ಏಕಾಏಕಿ ಸಾವಿರಾರು ಪ್ರವಾಸಿ ಕಾರುಗಳು ನುಗ್ಗಿದ್ದರಿಂದ ಮುಳ್ಳಯ್ಯನಗಿರಿಯ ಅತ್ಯಂತ ಕಿರಿದಾದ ರಸ್ತೆಯಲ್ಲಿ ವಾಹನಗಳು ಚಲಿಸಲಾಗದೆ ಜಾಗದಲ್ಲೇ ನಿಲ್ಲುವಂತಾಗಿದೆ. ಪ್ರಮುಖವಾಗಿ ಪಂಡರವಳ್ಳಿ ಹಾಗೂ ಸೀತಾಳಯ್ಯನಗಿರಿ ಭಾಗದಲ್ಲಿ ಭೀಕರ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಕಾರುಗಳು ಸಾಲಿನಲ್ಲಿ ಸಿಲುಕಿಕೊಂಡಿವೆ.

ಇದರಿಂದಾಗಿ ಬೆಳಗಿನಿಂದಲೇ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯಬೇಕಾದ ಕಾರಣ ಮಕ್ಕಳು, ವೃದ್ಧರು ಸೇರಿದಂತೆ ಇಡೀ ಪ್ರವಾಸಿಗರು ತೀವ್ರ ಹೈರಾಣಾಗಿದ್ದಾರೆ.

Traffic jam near Mullaiyanagari

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...