Home namma chikmagalur chikamagalur ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ
chikamagalurHomeLatest Newsnamma chikmagalur

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

Share
Share

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಟೌನ್‌ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಸಮೀಪದಲ್ಲೇ ಕೆಲವರು ಕೆಂಪು ಬಾವುಟ ಹಿಡಿದು ಯೋಜನೆ ಪರವಾಗಿ ಪ್ರತಿಭಟನೆ ನಡೆಸುತ್ತಿರುವುದು ಗಮನಾರ್ಹವಾಗಿದೆ. ಈ ಪ್ರತಿಭಟನೆಗೆ ಮುಖ್ಯಮಂತ್ರಿ ಅವರೇ ಪರೋಕ್ಷವಾಗಿ ಬೆಂಬಲ ನೀಡಿ ಕೆಲವರನ್ನು ಮುಂದಿಟ್ಟಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರೂ, ಅವರ ಬದಲಿಗೆ ಇತರರನ್ನು ಕಳುಹಿಸಲಾಗಿದೆ ಎಂದು ಟೀಕಿಸಿದ ಅವರು, ಸ್ವಪ್ರತಿಷ್ಠೆಗಾಗಿ ಯೋಜನೆಯನ್ನು ಯಾವುದೇ ಬೆಲೆಗೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಯಾವುದೇ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸುವ ಮೊದಲು ಭೂಮಿ ಕಳೆದುಕೊಳ್ಳುವ ರೈತರೊಂದಿಗೆ ನೇರವಾಗಿ ಚರ್ಚಿಸಬೇಕು. ನೈಸ್ ಯೋಜನೆ ಜಾರಿಗೆ ಬಂದ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ರೈತರ ಮಧ್ಯೆ ತೆರಳಿ ಸಭೆ ನಡೆಸಿದ್ದರು. ಆದರೆ ಈಗಿನ ಸರ್ಕಾರ ರೈತರ ಅಭಿಪ್ರಾಯವನ್ನೇ ಕಡೆಗಣಿಸಿ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ೧೨ ಮಂದಿ ಶಾಸಕರು ಅಡ್ಡಮತದಾನ ಮಾಡಿರುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಇದರ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತಪಡಿಸಿದರು. ಅನುದಾನ ಸೇರಿದಂತೆ ವಿವಿಧ ಆಮಿಷಗಳನ್ನು ಒಡ್ಡಿ ಶಾಸಕರನ್ನು ಸೆಳೆದಿರಬಹುದು. ಆದರೆ ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಮಲೆನಾಡಿನ ರೈತರ ಜೀವಾಳವಾಗಿರುವ ಅಡಕೆ ಬೆಳೆ ವಿವಿಧ ರೋಗಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅಡಕೆಗೆ ಬಂದಿರುವ ರೋಗಗಳ ಕುರಿತು ಸಮರ್ಪಕ ಸಂಶೋಧನೆ ನಡೆಯುತ್ತಿಲ್ಲ. ಅಡಕೆ ಸಂಶೋಧನಾ ಕೇಂದ್ರ ನಿಷ್ಕ್ರಿಯಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸಂಶೋಧನೆಗೆ ಉತ್ತೇಜನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಅಯೋಧ್ಯೆಯ ರಾಮ ಮಂದಿರವು ದೇಶದ ಹಿಂದುಗಳ ಪವಿತ್ರ ಕ್ಷೇತ್ರವಾಗಿದ್ದು, ಅದರ ನಿರ್ಮಾಣಕ್ಕೆ ದೇಶದಾದ್ಯಂತ ಜನರು ಪಕ್ಷಾತೀತವಾಗಿ ದೇಣಿಗೆ ನೀಡಿದ್ದಾರೆ. ಇಂತಹ ಪವಿತ್ರ ಕ್ಷೇತ್ರದ ಹುಂಡಿಗೆ ಕನ್ನ ಹಾಕಿರುವುದು ಅತ್ಯಂತ ಖಂಡನೀಯ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಧಾಕರ ಶೆಟ್ಟಿ ಒತ್ತಾಯಿಸಿದರು.

Attempt to implement Bidadi Township project through oppression

 

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...