Home namma chikmagalur chikamagalur ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಬೃಹತ್ ಪ್ರತಿ ಭಟನೆ ನಡೆಸಿದರು.

ಈ ವೇಳೆ ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ಮಾತನಾಡಿ ನಗರದಲ್ಲಿ ಸುಮಾರು ೪ ಸಾವಿರ ಆಟೋಗಳಿವೆ. ಅಲ್ಲದೇ ಚಿಕ್ಕಮಗಳೂರು ನಗರ ಪ್ರಸ್ತುತ ಯಾವುದೇ ಮಹಾನಗರ ಪಾಲಿಕೆಯಾಗಿಲ್ಲ. ಇದು ಅತ್ಯಂತ ಚಿಕ್ಕ ನಗರವಾಗಿದೆ ಎಂದು ತಿಳಿಸಿದರು.

ಪ್ರಸ್ತುತ ನಗರದಲ್ಲಿರುವ ಆಟೋಗಳಿಗೆ ಬಾಡಿಗೆ ಇಲ್ಲದೇ ಚಾಲಕರು ಮತ್ತು ಮಾಲೀಕರು ತುಂಬಾ ಸಂ ಕಷ್ಟದಲ್ಲಿದ್ದಾರೆ. ಈ ನಡುವೆ ನಗರಕ್ಕೆ ಹೆಚ್ಚಿನ ಆಟೋ ಪರವಾನಗಿಯನ್ನು ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ನಗರಕ್ಕೆ ಹೊಸದಾಗಿ ಆಟೋ ಪರವಾನಗಿಯನ್ನು ನೀಡಬಾರದು ಎಂದರು.

ಆಟೋ ಬಾಡಿಗೆ ಕ್ಷೀಣಿಸುತ್ತಿರುವ ನಡುವೆ ರ್‍ಯಾಪಿಡ್ ಬೈಕ್ ಹಾವಳಿ ಸಂಖ್ಯೆ ನಗರದಲ್ಲಿ ಅನಧಿಕೃತ ವಾಗಿ ಸಂಚರಿಸುತ್ತಿವೆ. ಇದುವರೆಗೂ ರ್‍ಯಾಪಿಡ್ ಬೈಕ್‌ಗಳು ಯಾವ ಮಾನದಂಡದ ಮೇಲೆ ಬಾಡಿಗೆ ವಾಹನ ಗಳಾಗಿ ಸಂಚರಿಸುತ್ತಿರುವುದು ಅರ್ಥವಾಗುತ್ತಿಲ್ಲ ಎಂದು ಹೇಳಿದರು.

ಹಳದಿ ಬೋರ್ಡ್ ದ್ವಿಚಕ್ರ ವಾಹನಗಳಿಗೆ ಪರವಾನಗಿ ಇಲ್ಲದೇ ಸಂಚರಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ವೈಟ್ ಬೋರ್ಡ್ ದ್ವಿಚಕ್ರ ವಾಹನಗಳನ್ನು ಸಹ ಬಾಡಿಗೆಗೆ ಬಳಸುತ್ತಿರುವುದು ಆಟೋ ಚಾ ಲಕರು ಮತ್ತು ಮಾಲೀಕರು ತುಂಬಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಆದ್ದರಿಂದ ಜಿಲ್ಲಾಡಳಿತ ಕೂಲಂಕೂಷವಾಗಿ ಪರಿಶೀಲಿಸಿ, ಆಟೋ ಪರವಾನಗಿಯನ್ನು ಮತ್ತು ದ್ವಿ ಚಕ್ರ ವಾಹನಗಳ ರ್‍ಯಾಪಿಡ್ ಬೈಕ್‌ಗಳನ್ನು ನಿಲ್ಲಿಸುವಂತೆ ಮನವಿ ಮಾಡಲಾಗುತ್ತಿದೆ. ಶೀಘ್ರವೇ ಈ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟಕಾಲ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ರಾಘವೇಂದ್ರ, ಪದಾಧಿಕಾರಿಗಳಾದ ನಿಸಾರ್, ಯಶ್ವಂತ್, ಅಶ್ವತ್, ಅಬ್ಬಾಸ್, ಅಣ್ಣು, ಜಗದೀಶ್ ಮರಬೈಲು, ಉದಯಕುಮಾರ್ ಮುಂತಾದವ ರು ಉಪಸ್ಥಿತರಿದ್ದರು.

Protest demanding suspension of Rapid Bike-Auto licenses

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...