Home namma chikmagalur chikamagalur ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ
chikamagalurCrime NewsHomeLatest Newsnamma chikmagalur

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

Share
Share

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ (KA18EM9510) ತೆರಳುತ್ತಿದ್ದ ಮೆಹಬೂಬ್ ಬಿ ಅಲಿಯಾಸ್ ಸಿಬ್ರಾನ್ ಎಂಬ ಯುವತಿಗೆ, ಎದುರಿನಿಂದ ತಪ್ಪು ದಿಕ್ಕಿನಲ್ಲಿ (ರಾಂಗ್ ಸೈಡ್) ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಕಾರು (KA18P2669) ನಿಯಂತ್ರಣ ತಪ್ಪಿ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಯುವತಿಯ ಯಕೃತ್ತಿಗೆ ಗಂಭೀರ ಹಾನಿಯಾಗಿದ್ದು (Grade IV Liver Injury), ದೇಹದ ಒಳಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಸದ್ಯ ಸಂತ್ರಸ್ತೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಅಪಘಾತ ಎಸಗಿದ ಕಾರು ಚಾಲಕಿಯನ್ನು ಎಐಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಎಂದು ಗುರುತಿಸಲಾಗಿದೆ. ಈಕೆ ಅಪಘಾತ ನಡೆದ ತಕ್ಷಣ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಮತ್ತು ಯುವತಿಯ ಸ್ನೇಹಿತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಸ್ಪತ್ರೆಗೆ ಬಂದ ನಂತರವೂ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿತೆ, ಸಂತ್ರಸ್ತೆಯ ಕುಟುಂಬಕ್ಕೆ ಯಾವುದೇ ರೀತಿಯ ವೈದ್ಯಕೀಯ ನೆರವು ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಈ ಸಂಬಂಧ ಶಾವುಲ್ ಅಮೀದ್ ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮೋಟಾರು ವಾಹನಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Fatal road accident near AIT Circle

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...