Home namma chikmagalur chikamagalur ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ
chikamagalurHomeLatest Newsnamma chikmagalur

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

Share
Share

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವತಿಯಿಂದ ಅಣಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಜಲಮೂಲಗಳಲ್ಲಿ ಸಂಭವಿಸಬಹುದಾದ ಪ್ರವಾಹ ಹಾಗೂ ತುರ್ತು ಪರಿಸ್ಥಿತಿಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಭಾಯಿಸುವ ಮತ್ತು ಸಾರ್ವಜನಿಕರ ಜೀವ ರಕ್ಷಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ರಕ್ಷಣಾ ಅಣಕು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಖುದ್ದಾಗಿ ಭಾಗವಹಿಸಿ ಇಡೀ ಪ್ರಕ್ರಿಯೆಯನ್ನು ವೀಕ್ಷಿಸಿದರು. ಅವರೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಸೇರಿದಂತೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಾಚರಣೆಯ ವೇಳೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ನುರಿತ ಸಿಬ್ಬಂದಿಗಳು ರಕ್ಷಣಾ ಬೋಟ್‌ಗಳು ಮತ್ತು ಜೀವ ರಕ್ಷಕ ಸಲಕರಣೆಗಳನ್ನು ಬಳಸಿಕೊಂಡು, ಪ್ರವಾಹದಲ್ಲಿ ಸಿಲುಕಿದವರನ್ನು ಹೇಗೆ ಸುರಕ್ಷಿತವಾಗಿ ದಡಕ್ಕೆ ತರಬೇಕು ಎಂಬುದನ್ನು ಅತ್ಯಂತ ರೋಮಾಂಚಕವಾಗಿ ಪ್ರದರ್ಶಿಸಿದರು.

ವಿಪತ್ತು ನಿರ್ವಹಣೆಯಲ್ಲಿ ವಿವಿಧ ಇಲಾಖೆಗಳ ನಡುವಿನ ಸಮನ್ವಯತೆಯನ್ನು ಹೆಚ್ಚಿಸಲು ಈ ತರಬೇತಿ ರೂಪದ ಅಣಕು ಪ್ರದರ್ಶನವು ಸಹಕಾರಿಯಾಯಿತು.

Mock demonstration to deal with flood situation

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ...