Home namma chikmagalur chikamagalur ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ
chikamagalurHomeLatest Newsnamma chikmagalur

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

Share
Share

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಫಲಾಹಾರ ಸ್ವಾಮಿ ಮಠದ ಶ್ರೀ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಪ್ರಗತಿಪರ ಯುವ ಬಳಗ ನಮ್ಮ ನಡಿಗೆ ಸ್ವಚ್ಛತೆಯ ಕಡೆಗೆ ಅಭಿಯಾನದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಮಲ್ಲೇನಹಳ್ಳಿ ಪ್ರದೇಶ ಸೇರಿದಂತೆ ಇಡೀ ಮಲೆನಾಡು ನಿಸರ್ಗದತ್ತ ಸೌಂದರ್ಯದ ಖ, ಅದನ್ನು ಮುಕ್ಕಾಗದಂತೆ ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಗ್ರಾಮೀಣರಿಂದ ಆಗಬೇಕಾಗಿದೆ ಎಂದರು.

ನೆಲ,ಜಲ,ಭೂಮಿ, ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವುದು ಕೇವಲ ಸರ್ಕಾರದ ಕೆಲಸವ? ಅಲ್ಲ ಅದು ನಮ್ಮೆಲ್ಲರ ಜವಾಬ್ದಾರಿ ಎಂದ ಅವರು ಮಲೆನಾಡಿನ ನಿಸರ್ಗದತ್ತ ಪ್ರಕೃತಿಯನ್ನು ಸೌಂದರ್ಯ ಮತ್ತು ಪರಿಸರವನ್ನು ಈಗಲೇ ಉಳಿಸಲು ಮುಂದಾಗದಿದ್ದರೆ ಮುಂದೊಂದು ದಿನ ಕೊಡಗಿನಲ್ಲಾದ ಅವಘಡ ಇಲ್ಲೂ ನಡೆಯುತ್ತದೆ ಎಂದು ಎಚ್ಚರಿಸಿದರು.

ಮುಂದುವರೆದ ದೇಶಗಳಲ್ಲಿ ಮರ ಬೇಕಾದರೆ ಬೇರೆ ದೇಶಗಳಿಂದ ತರಿಸಿಕೊಳ್ಳುತ್ತಾರೆ ಆದರೆ ಇಲ್ಲಿ ನಾವು ಮರಗಳನ್ನು ಕಡಿದು ಕಾಡನ್ನು ನಾಶ ಮಾಡುತ್ತಿದ್ದೇವೆ ಎಂದು ವಿ?ಧಿಸಿದ ಶ್ರೀಗಳು ಅಭಿವೃದ್ದಿಯ ಹೆಸರಿನಲ್ಲಿ ನಮ್ಮ ಬದುಕು ದಾರಿ ತಪ್ಪಿದೆ ಅದನ್ನು ಸರಿದಾರಿಗೆ ತರುವ ಕೆಲಸವಾಗಬೇಕು ಎಂದರು.

ಮಲೆನಾಡಿನ ಸುಂದರ ಪರಿಸರ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ನಾವು ನೆಲ, ಜಲ, ಗಾಳಿ, ಪರಿಸರದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು, ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು, ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ಗ್ರಾಮದ ಇಮ್ಯಾನ್ಯುಯೆಲ್ ಚರ್ಚಿನ ಖಜಾಂಚಿ ಮೋಸಸ್ ಸುರೇಶ್ ಮಾತನಾಡಿ ಪ್ರವಾಸಿಗರಿಂದಾಗಿ ಮಲ್ಲೇನಹಳ್ಳಿಯ ಪರಿಸರ ಹಾಳಾಗುತ್ತಿದೆ, ಪ್ರವಾಸಿಗರು ರಸ್ತೆ ಬದಿ ವಾಹನವನ್ನು ನಿಲ್ಲಿಸಿ ತ್ಯಾಜ್ಯಗಳನ್ನು ಎಸೆಯುತ್ತಿದ್ದಾರೆ, ಕೋಳಿಯ ತ್ಯಾಜ್ಯವನ್ನು ಹಳ್ಳಗಳಿಗೆ ಸುರಿಯಲಾಗುತ್ತಿದೆ, ಪರಿಸ್ಥಿತಿ ಇದೇ ರೀತಿ ಮುಂದುವರೆದಲ್ಲಿ ರೋಗ ರುಜಿನಗಳು ಗ್ರಾಮವನ್ನು ಕಾಡುತ್ತವೆ ಎಂದು ಎಚ್ಚರಿಸಿದರು.

ಜಾಮಿಯಾ ಮಸೀದಿಯ ಧರ್ಮಗುರು ಅಪ್ಸರ್ ಭಾ? ಮಾತನಾಡಿ ಸ್ವಚ್ಛತೆಯಿದ್ದಲ್ಲಿ ಆರೋಗ್ಯವಿರುತ್ತದೆ ಎಂಬುದನ್ನು ಗ್ರಾಮಸ್ಥರು ಮನಗಾಣಬೇಕು, ನಮ್ಮ ಹಳ್ಳಿಯ ಸ್ವಚ್ಛತೆಗೆ ಸರ್ಕಾರವನ್ನು ಅಧಿಕಾರಿಗಳನ್ನು ಕಾಯುವ ಬದಲು ನಾವೇ ಸ್ವಚ್ಛತೆಗೆ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ದಸಂಸ ಮುಖಂಡ ಪಿ.ವೇರಾಯುಧನ್ ಮಾತನಾಡಿ ನಮ್ಮ ಮಿತಿಮೀರಿದ ದುರಾಸೆಯಿಂದಾಗಿ ಶುದ್ಧವಾದ ನೀರು, ಗಾಳಿ, ಮ, ಸ್ವಚ್ಛ, ಸುಂದರ ಪರಿಸರವನ್ನು ಹಾಳು ಮಾಡಿದ್ದೇವೆ, ಮರಗಳನ್ನು ಕಡಿದು ಕಾಡನ್ನು ನಾಶಗೊಳಿಸಿದ್ದೇವೆ ಎಂದು ವಿ?ಧಿಸಿ ಈಗಲಾದರೂ ಗ್ರಾಮೀಣ ಜನತೆ ಎಚ್ಚೆತ್ತುಕೊಳ್ಳಬೇಕು ಪರಿಸರವನ್ನು ಉಳಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕ ನಾಗರಾಜ್ ಮಾತನಾಡಿ ಜಿಲ್ಲಾಡಳಿತದಿಂದ ಈಗಾಗಲೇ ಗಿರಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ನಿ?ಧಿಸಲಾಗಿದ್ದು ಮುಂದಿನ ದಿನಗಳಲ್ಲಿ ಗಿರಿಯ ಸುತ್ತಮುತ್ತಲ ಪ್ರದೇಶಗಳಲ್ಲೂ ನಿ?ಧಿಸಲಾಗುವುದು ಎಂದು ತಿಳಿಸಿದರು.

ದೇವೀರಮ್ಮ ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಎ.ಕುಲಶೇಖರ್ ಮಾತನಾಡಿ ಹೋಂ ಸ್ಟೇಗಳು ಹೆಚ್ಚಳವಾದ ನಂತರ ಗ್ರಾಮ ಮತ್ತು ಸುತ್ತಮುತ್ತಲ ಪರಿಸರ ಹಾಳಾಗುತ್ತಿದ್ದು ಅದನ್ನು ತಡೆಗಟ್ಟುವ ಕೆಲಸವಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ರೂವಾರಿ ಎಂ.ಪಿ. ಗಣೇಶ್ ಗ್ರಾಮಸ್ಥರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶ್ಮಿತ ಈ ಗ್ರಾಮ, ಪರಿಸರ, ನೀರು,ಗಾಳಿ, ಭೂಮಿ ಎಲ್ಲವೂ ನಮ್ಮದು ಎಂಬ ಭಾವನೆಯನ್ನು ಗ್ರಾಮಸ್ಥರು ಬೆಳೆಸಿಕೊಳ್ಳಬೇಕು, ಗ್ರಾಮದ ಸ್ವಚ್ಛತೆಗೆ ಗ್ರಾಮ ಪಂಚಾಯಿತಿಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ತಿಪ್ಪೇಸ್ವಾಮಿ, ಪ್ರೌಢಶಾಲಾ ಶಿಕ್ಷಕ ವೆಂಕಟೇಶ್, ಉಪವಲಯ ಅರಣ್ಯಾಧಿಕಾರಿ ಉಮೇಶ್ ಮಾತನಾಡಿದರು. ಈ ವೇಳೆ ಗ್ರಾಮದ ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಕುರಿತು ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ಸಂವಾದ ನಡೆಯಿತು.

ದೇವೀರಮ್ಮ ದೇವಾಲಯದ ಅಭಿವೃದ್ಧಿ ಸಮಿತಿ ಸದಸ್ಯರಾದ ಸಿದ್ದಪ್ಪ ಶೆಟ್ಟಿ, ಬಸವರಾಜೇಗೌಡ, ಕಲ್ಲೇಶ್, ಜಾಮಿಯಾ ಮಸೀದಿ ಅಧ್ಯಕ್ಷ ಅಲ್ತಾಫ್ ಅಹಮದ್, ಗ್ರಾಮ ಪಂಚಾಯಿತಿ ಅಧಿಕಾರಿ ಉ? ಉಪಸ್ಥಿತರಿದ್ದರು.

We all have the responsibility to preserve and nurture a clean environment.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ...