Home namma chikmagalur chikamagalur ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು
chikamagalurCrime NewsHomeLatest Newsnamma chikmagalur

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

Share
Share

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

​ಆಲ್ದೂರು ಅರಣ್ಯ ವಲಯದ ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಹೆಬ್ಬಾಳ ಗದ್ದೆಯ ಜಮೀನೊಂದರಲ್ಲಿ ಕಾಡಾನೆ ಶವವಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

​ವಿಷಯ ತಿಳಿಯುತ್ತಿದ್ದಂತೆ ಆಲ್ದೂರು ವಲಯದ ಉನ್ನತ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಸಾವಿಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಜಮೀನಿನ ಸುತ್ತಮುತ್ತ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಸಾವನ್ನಪ್ಪಿದೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವಷ್ಟೇ ಆನೆಯ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.

A male wild elephant died in Hebbal paddy field in Kundur Forest.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು...