Home namma chikmagalur chikamagalur ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು
chikamagalurHomeLatest Newsnamma chikmagalur

ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು

Share
Share

ಕಳಸ: ನಿರಂತರ ಮಳೆಯಿಂದಾಗಿ ರಸ್ತೆ ತೇವಾಂಶದಿಂದ ಕೂಡಿದ್ದ ಪರಿಣಾಮ, ಬೈಕ್‌ಗೆ ಸೈಡ್ ಕೊಡಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬೈನೇಕಾಡು ಹೋಂ ಸ್ಟೇ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರುದ್ದಾರೆ.

ಹೊರನಾಡಿನಿಂದ ಉಡುಪಿಯ ಕಡೆಗೆ ಪ್ರಯಾಣಿಸುತ್ತಿದ್ದ ವ್ಯಾಗನರ್ ಕಾರು ಬೈನೇಕಾಡು ಹೋಂ ಸ್ಟೇ ಬಳಿ ತಲುಪಿದಾಗ ಎದುರಿನಿಂದ ಬಂದ ಬೈಕ್‌ಗೆ ಜಾಗ ಬಿಟ್ಟುಕೊಡಲು ಮುಂದಾಗಿದೆ. ಈ ವೇಳೆ ಮಳೆಯಿಂದಾಗಿ ರಸ್ತೆಯು ತೀವ್ರ ತೇವಾಂಶದಿಂದ ಕೂಡಿದ್ದರಿಂದ ಕಾರು ದಿಢೀರನೆ ಸ್ಕಿಡ್ ಆಗಿದೆ. ಚಾಲಕನ ನಿಯಂತ್ರಣಕ್ಕೆ ಸಿಗದ ಕಾರು ರಸ್ತೆ ಪಕ್ಕದ ಕಾಫಿ ತೋಟಕ್ಕೆ ನುಗ್ಗಿ ಉರುಳಿ ಬಿದ್ದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಕಾರಿನಲ್ಲಿದ್ದ ಐವರನ್ನು ಅತ್ಯಂತ ಜಾಗರೂಕತೆಯಿಂದ ಹೊರತೆಗೆದು ರಕ್ಷಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಲೆನಾಡು ಭಾಗದಲ್ಲಿ ಸದ್ಯ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ರಸ್ತೆಗಳು ಸದಾ ತೇವ ಮತ್ತು ಜಾರಿಕೆಯಿಂದ ಕೂಡಿರುತ್ತವೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಹಾಗೂ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

Car loses control and rolls into coffee plantation

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...