ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦ ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿ ಕಾಮಗಾರಿ ಮುಂದುವರಿಸಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ತರೀಕೆರೆ ತಾಲ್ಲೂಕಿನಲ್ಲಿ ಭಾನುವಾರ ಭದ್ರಾ ಮೇಲ್ದಂಸಡೆ ಯೋಜನೆಯ ಕಾಲುವೆ ಹಾಗೂ ಜಲಾಶಯದ ಕಾಮಗಾರಿ ವೀಕ್ಷಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ
ಮಳೆ ಕೊರತೆಯಿಂದಾಗಿ ಈ ಬಾರಿ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆ ಇರುವುದು ನಿಜ. ಆದರೆ, ಈ ವ್ಯಾಪ್ತಿಯ ಚಿತ್ರದುರ್ಗ, ತುಮಕೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯಲ್ಲೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಜಲಾಶಯಗಳಲ್ಲಿ ಅಗತ್ಯ ನೀರನ್ನು ಕಾಯ್ದಿರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ಪರಿಶೀಲಿಸಿದ ಸಚಿವರು, ಅರಣ್ಯ ಇಲಾಖೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳನ್ನು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ಭಾಗದ ಕಾಲುವೆ ಹಾದುಹೋಗುವ ಮಾರ್ಗದಲ್ಲಿ ಅರಣ್ಯ ಇಲಾಖೆಯ ಕೆಲವು ಸಮಸ್ಯೆಗಳಿದ್ದವು.
ಹಾಗೆಯೇ ಚಿತ್ರದುರ್ಗ ಸೇರಿದಂತೆ ಕೆಲವು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಣ್ಣಪುಟ್ಟ ಅಡೆತಡೆಗಳಿದ್ದವು. ಇವೆಲ್ಲವನ್ನೂ ಆದಷ್ಟು ಬೇಗ ನಿವಾರಿಸಿ, ಕೆಲಸಕ್ಕೆ ವೇಗ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದ್ದು, ಅವರು ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು.
ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮುಂತಾದವರು ಹಾಜರಿದ್ದರು.
The Bhadra Upper River Project will cost Rs 12000 crore from the state itself.
Leave a comment