Home namma chikmagalur chikamagalur ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ
chikamagalurHomeLatest Newsnamma chikmagalur

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

Share
Share

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್ ಮೀನಾ ಅವ ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ ರಾಜ್ಯದಲ್ಲಿ ಕನ್ನಡಕ್ಕೆ ಧಕ್ಕೆ ತರುವಂತ ಕೆಲಸ ಉಂಟಾಗುತ್ತಿದೆ. ಕರ್ನಾಟಕ ಸರ್ಕಾರದ ಆದೇಶದಂತೆ ಕಡ್ಡಾಯವಾಗಿ ನಾಮಫಲಕ ಅಳ ವಡಿಸುವ ಅಂಗಡಿಗಳಲ್ಲಿ ಶೇ.೬೦ ಕನ್ನಡ, ಶೇ.೪೦ ರಷ್ಟು ಆಂಗ್ಲಭಾಷೆ ಅಳವಡಿಸದಿದ್ದಲ್ಲಿ ಅಂಗಡಿ ಪರವಾನಗಿ ಯನ್ನು ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿರುವ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತ ಹಾಗೂ ವಿವಿಧ ಅಧಿಕಾರಿ, ಆಡಳಿತ ಮಂಡಳಿಗಳು ಕನ್ನಡ ನಾಮಫಲಕದ ಬಗ್ಗೆ ಗಮನಹರಿಸುತ್ತಿಲ್ಲ. ನೇರವಾಗಿ ಮುಖ್ಯಮಂತ್ರಿಗಳ ಆದೇಶವನ್ನು ಕಡೆಣಿಸುತ್ತಿದ್ದಾರೆ. ಅಂಗಡಿದಾರರು ಅಧಿಕಾರಿಗಳ ಮಾತಿಗೆ ಬೆಲೆಕೊಡುತ್ತಿಲ್ಲ. ಹೀಗಾಗಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಆಂಗ್ಲ ಮಾಧ್ಯಮ ಶಾಲಾ-ಕಾಲೇಜುಗಳಲ್ಲಿ ನಾಡಗೀತೆ ಕಡ್ಡಾಯಗೊಳಿಸಬೇಕು. ನಿರ್ಲಕ್ಷ್ಯಿ ಸಿದರೆ ಅಂತಹ ಶಾಲಾ-ಕಾಲೇಜುಗಳ ಪ್ರಮಾಣ ಪತ್ರವನ್ನು ರದ್ದುಗೊಳಿಸುವ ಮೂಲಕ ಶಾಲಾಡಳಿತ ಮಂ ಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಸೇನೆ ನಗರಾಧ್ಯಕ್ಷ ಸತೀಶ್ ಮಾತನಾಡಿ ಹೋಟೆಲ್, ಹೊಂಸ್ಟ್ರೇ, ರೆಸಾರ್ಟ್‌ಗಳಲ್ಲಿ ಕಾರ್ಯನಿವ ವಹಿಸುವ ಸಿಬ್ಬಂದಿಗಳಿಗೆ ಮಾಲೀಕರು ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದು ಸೂಕ್ತ ತನಿಖೆ ನಡೆಸಬೇಕು. ಪ್ರತಿ ನಿತ್ಯವು ನೂರಾರು ತೆರಳುವ ಹೋಟೆಲ್‌ಗಳಲ್ಲಿ ಮಲೀನತೆ ಹೆಚ್ಚಿದ್ದು ಸ್ವಚ್ಷತೆಗೆ ಆದ್ಯ ತೆ ನೀಡಲು ಕ್ರಮವಹಿಸಬೇಕು ಎಂದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಜಿ.ಪಂ. ಸಿಇಓ ಅವರಿಗೆ ಈ ಸಂಬಂಧ ಮನವಿ ಸಲ್ಲಿಸ ಲಾಯಿತು. ಈ ಸಂದರ್ಭದಲ್ಲಿ ಕನ್ನಡಸೇನೆ ವಕ್ತಾರ ಹುಣಸೇಮಕ್ಕಿ ಲಕ್ಷ್ಮಣ್, ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಮುಖಂಡರುಗಳಾದ ಹರೀಶ್, ಪಾಲಾಕ್ಷಿ, ನವೀನ್, ಜಗದೀಶ್, ವೆಂಕಟೇಶ್, ಸೋಮಣ್ಣ ಮುಂತಾದವರು ಉಪಸ್ಥಿತರಿದ್ದರು.

Appeal to use 60% Kannada words on nameplates

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ,...