Home ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು
Home

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾದ ಗಂಭೀರ ಪ್ರಕರಣವೊಂದು ದಾಖಲಾಗಿದೆ.

ರಾಷ್ಟ್ರೀಯ ನಾಪತ್ತೆಯಾದ ಮತ್ತು ಶೋಷಿತ ಮಕ್ಕಳ ಕೇಂದ್ರ (NCMEC) ನೀಡಿದ ದೂರಿನ ವರದಿ ಆಧರಿಸಿ ಸೈಬರ್ ಪೊಲೀಸ್ ಸಿಬ್ಬಂದಿ ಹೆಚ್.ಕೆ. ಮಹೇಂದ್ರ ಅವರು ದೂರು ದಾಖಲಿಸಿದ್ದಾರೆ ಎಂದು ಎನ್‌ಸಿಆರ್‌ಪಿ ಪೋರ್ಟಲ್‌ನಲ್ಲಿ ಲಭ್ಯವಾದ ತಾಂತ್ರಿಕ ಮಾಹಿತಿ ಹಾಗೂ ಐಪಿ ಅಡ್ರೆಸ್ ಆಧರಿಸಿ ತನಿಖೆ ನಡೆಸಿದಾಗ, ಮೂಡಿಗೆರೆ ತಾಲೂಕಿನ ಬಣಕಲ್ ನಿವಾಸಿ ಪುಷ್ಪಾ ಎಂಬುವವರ ಮೊಬೈಲ್ ಸಂಖ್ಯೆಯಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಅಪ್ರಾಪ್ತರು ನಗ್ನವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಸುಮಾರು ಒಂದೂವರೆ ನಿಮಿಷದ ವಿಡಿಯೋವನ್ನು ಡೌನ್‌ಲೋಡ್ ಹಾಗೂ ಶೇರ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸದ್ಯ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ.

Case registered for sharing obscene video on social media

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ,...