Home namma chikmagalur chikamagalur ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ
chikamagalurCrime NewsHomeLatest Newsnamma chikmagalur

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

Share
Share

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಶೀಲಾ (೫೨) ಎಂದು ಗುರುತಿಸಲಾಗಿದೆ. ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ದಾಳಿಯ ವೇಳೆ ಕಾಡುಕೋಣ ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶೀಲಾ ಅವರನ್ನು ಸ್ಥಳೀಯರು ತಕ್ಷಣ ತೋಟದಿಂದ ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆಯಿಂದ ಬಿಳಗುಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಪ್ರದೇಶಗಳ ಸಮೀಪ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Woman killed in wild buffalo attack in Kalasa

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...