Home namma chikmagalur chikamagalur ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ
chikamagalurHomeLatest Newsnamma chikmagalur

ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Share
Share

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡ್‌ನಿಂದ ಎಸ್.ಕೆ. ಬಾರ್ಡ‌್ರವರೆಗಿನ ರಸ್ತೆ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30, 2026ರವರೆಗೆ ಸಂಪೂರ್ಣವಾಗಿ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ನಿರ್ದಿಷ್ಟ ಹೆದ್ದಾರಿ ವಲಯದಲ್ಲಿರುವ ನಾಲ್ಕು ಕಿರು ಸೇತುವೆಗಳು ತೀರಾ ಶಿಥಿಲಾವಸ್ಥೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 12 ಟನ್‌ಗಿಂತ ಅಧಿಕ ಭಾರದ ಸರಕು ಸಾಗಾಣಿಕೆ ವಾಹನಗಳಾದ ಟಿಪ್ಪರ್, ಲಾರಿ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿ ಹೊತ್ತ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ, 1950ರಿಂದ 1960ರ ಅವಧಿಯಲ್ಲಿ ನಿರ್ಮಿಸಲಾದ ಕಿರು ಸೇತುವೆಗಳ ಕಲ್ಲುಗಳು ಕಿತ್ತುಬಂದಿರುವುದು,

ಕಂಬಗಳು ಭಾಗಶಃ ಹಾನಿಗೊಳಗಾಗಿರುವುದು ಮತ್ತು ಸ್ಲಾಬ್‌ನ ಕಾಂಕ್ರೀಟ್ ಬಿದ್ದು ಸರಳುಗಳು ಹೊರ ಭಾಗಕ್ಕೆ ಕಾಣಿಸುತ್ತಿರುವುದು ಪತ್ತೆಯಾಗಿದೆ. ಪ್ರಸ್ತುತ ಮಳೆಗಾಲ ಆರಂಭವಾಗುತ್ತಿರುವುದರಿಂದ ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿ ಸೇತುವೆಗಳು ಮತ್ತಷ್ಟು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ. ಜೊತೆಗೆ, ಈ ರಸ್ತೆಯು ಬಹುತೇಕ ಏಕಪಥ ರಸ್ತೆಯಾಗಿದ್ದು, ತೀವ್ರ ತಿರುವುಗಳು ಹಾಗೂ ಕಡಿದಾದ ಏರಿಗಳಿಂದ ಕೂಡಿದೆ. ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ ಮಣ್ಣು ಕೊಚ್ಚಿಹೋಗಿ ಭಾರಿ ವಾಹನಗಳ ಚಕ್ರಗಳು ಹೂತುಹೋಗುವ ಮತ್ತು ಅಪಘಾತಗಳು ಸಂಭವಿಸುವ ಗಂಭೀರ ಆತಂಕ ಎದುರಾಗಿರುವುದರಿಂದ ನಿರ್ಧಾರ ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು ಮತ್ತು ನರಸಿಂಹರಾಜಪುರ ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಇನ್ನು ಮುಂದೆ ಬಾಳೆಹೊನ್ನೂರು, ಮಾಗುಂಡಿ, ಕಳಸ ಹಾಗೂ ಕುದುರೆಮುಖ ಮಾರ್ಗವಾಗಿ ಎಸ್.ಕೆ. ಬಾರ್ಡರ್ ತಲುಪಬೇಕಾಗುತ್ತದೆ. ಇನ್ನು ಕೊಪ್ಪ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ, ಜಯಪುರ, ಬಾಳೆಹೊನ್ನೂರು, ಮಾಗುಂಡಿ, ಕಳಸ ಮತ್ತು ಕುದುರೆಮುಖ ರಸ್ತೆಯ ಮೂಲಕ ಎಸ್.ಕೆ. ಬಾರ್ಡರ್ ಕಡೆಗೆ ಸಾಗಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನ ಸವಾರರು ಮತ್ತು ಸಾರ್ವಜನಿಕರು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಈ ಬದಲಿ ಮಾರ್ಗಗಳನ್ನು ಬಳಸಬೇಕಾಗಿ ವಿನಂತಿಸಲಾಗಿದೆ.

Heavy vehicle traffic banned from Thanikode to SK border

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...