Home Crime News ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು
Crime NewsHomeKadurLatest Newsnamma chikmagalur

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

Share
Share

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ.

ಮೃತರನ್ನು ವಿಷ್ಣುಕುಮಾರ್ ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಸುಧಾ ಕೆ.ಎನ್. ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಮೀನಿನಲ್ಲಿ ಸರಿಯಾದ ಬೆಳೆ ಬಾರದೆ ಹಾಗೂ ಬೋರ್‌ವೆಲ್‌ಗಳಲ್ಲಿ ನೀರಿಲ್ಲದ ಕಾರಣ ವಿಷ್ಣುಕುಮಾ‌ರ್ ಅವರು ತೀವ್ರ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಜುಲೈ 7ರ ಬೆಳಗ್ಗೆ 11:00 ಗಂಟೆಗೆ ಜಮೀನಿಗೆ ಹೋದವರು ವಾಪಸ್ ಬಂದಿರಲಿಲ್ಲ.

ಸಂಜೆ ವೇಳೆ ಪಕ್ಕದ ತೋಟದ ಮನೆಯ ಹಿಂಭಾಗದಲ್ಲಿ ಬೆಂಕಿಯ ಹೊಗೆ ಬರುತ್ತಿರುವುದು ಹಾಗೂ ವಿಷ್ಣುಕುಮಾರ್ ಅವರ ಬೈಕ್ ನಿಂತಿರುವುದು ಕಂಡುಬಂದಿದೆ. ಸ್ಥಳಕ್ಕೆ ಹೋಗಿ ನೋಡಿದಾಗ ಮನುಷ್ಯನ ದೇಹ ಸಂಪೂರ್ಣ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾಲದ ಬಾಧೆಯಿಂದ ಮನನೊಂದು ಅವರೇ ಬೆಂಕಿ ಹಚ್ಚಿಕೊಂಡಿರಬಹುದು ಎಂದು ಪತ್ನಿ ಅನುಮಾನ ವ್ಯಕ್ತಪಡಿಸಿದ್ದು, ಸ್ಥಳ ಪರಿಶೀಲನೆ ನಡೆಸಿ ಸೂಕ್ತ ತನಿಖೆ ನಡೆಸುವಂತೆ ಹಾಗೂ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ವಿನಂತಿಸಿದ್ದಾರೆ. ಕಡೂರು ಪೊಲೀಸರು ಯು.ಡಿ.ಆರ್ (UDR) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Unable to repay loan farmer sets himself on fire and dies

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...