Home namma chikmagalur chikamagalur ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ
chikamagalurHomeLatest Newsnamma chikmagalur

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

Share
Share

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ.

ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್ ದಾಳಿನಡೆಸಿ ವಾಹನವನ್ನು ಪೊಲೀಸರು ಬೆನ್ನಟ್ಟುತ್ತಿದ್ದಂತೆ ಕಾರು ಬಿಟ್ಟು ಜಾನುವಾರು ಕಳ್ಳರು ಪರಾರಿಯಾಗಿದ್ದಾರೆ.

ಕೊಪ್ಪ ತಾಲೂಕಿನ ಗಡಿಕಲ್ ಚೆಕ್‌ಪೋಸ್ಟ್ ಸಮೀಪದಲ್ಲಿ ಕಾರ್ಯಾಚರಣೆ ನಡೆದಿದೆ. ನಂಬರ್ ಪ್ಲೇಟ್ ಕಿತ್ತುಹಾಕಿ ಜಾನುವಾರು ಕಳ್ಳತನಕ್ಕೆ ಯತ್ನಿಸಲಾಗಿದ್ದು,ಎರಡು ಗೋವುಗಳನ್ನು ಕೊಪ್ಪ ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.ಕೊಪ್ಪ ಪೊಲೀಸರ ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Protection of illegally transported cows

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...