Home namma chikmagalur chikamagalur ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
chikamagalurHomeLatest Newsnamma chikmagalur

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

Share
Share

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ.-1) 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹35,000 ದಂಡ ವಿಧಿಸಿದೆ.

2025ರ ಮೇ 6ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನ ನಿವಾಸಿ 25 ವರ್ಷದ ರಂಜನ್ ಗೌಡ ವಿರುದ್ಧ ವಿಚಾರಣೆ ನಡೆಸಲಾಗಿತ್ತು. ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ 376(1), 506 ಹಾಗೂ ಪೋಕ್ಸೋ ಕಾಯ್ದೆಯ ಕಲಂ 4ರಡಿ ಶಿಕ್ಷೆ ಪ್ರಕಟಿಸಿದೆ.

ಇದೇ ವೇಳೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ ₹6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಮೂಡಿಗೆರೆ ವೃತ್ತದ ಸಿಪಿಐ ರಾಜಶೇಖರ್ ಕೆ.ವಿ. ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರು ಹಾಗೂ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

POCSO case accused gets 10 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...