Home namma chikmagalur chikamagalur ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು
chikamagalurHomeLatest Newsnamma chikmagalur

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

Share
Oplus_16908288
Share

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ. ಈಗಲಾದರೂ ನಮ್ಮ ಸಮುದಾಯದ ಕಾಂಗ್ರೆಸ್ ಯುವ ಮುಂದಾಳುಗಳಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಕೆ.ಹನುಮಂತಪ್ಪ ಆಗ್ರಹಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ೩ ಭಾರಿ ರ್ಸ್ಪಸಿ ಅತ್ಯಲ್ಪ ಮತದಿಂದ ಪರಾಭವಗೊಂಡು ಈಗಲೂ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ತರೀಕೆರೆಯ ಗೋಪಿಕೃಷ್ಣ ಅವರಿಗೆ ಎಂಎಲ್ ಸಿ ಸ್ಥಾನ ನೀಡಬೇಕು. ಇದರಿಂದ ಸಮುದಾಯಕ್ಕೆ ಒಳಿತಾಗುತ್ತದೆ. ಜತೆಗೆ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿರುವ ದುರುಗೇಶಮಡಿವಾಳ ಅವರಿಗೆ ಯಾವುದಾದರೂ ನಿಗಮ, ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ತುಮಕೂರಿನಲ್ಲಿ ನಡೆದ ಮಡಿವಾಳ ಸಮಾವೇಶದಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ೨೦೨೩ ಕ್ಕೆ ಮಡಿವಾಳ ಸಮುದಾಯಕ್ಕೆ ಒಂದು ಎಂಎಲ್ಸಿ ಸ್ಥಾನ ನೀಡೇ ತೀರುತ್ತೇನೆ ಎಂದು ಭರವಸೆ ನೀಡಿದ್ದರು. ಅದರಂತೆ ಅವರು ವಚನ ಭ್ರಷ್ಟರಾಗದೆ ನಮ್ಮ ಜನಾಂಗಕ್ಕೆ ಎಂಎಲ್ಸಿ ಸ್ಥಾನ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಬಹುತೇಕ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರು ಗೆಲ್ಲಲು ಮಡಿವಾಳರ ಮತಗಳೇ ನಿರ್ಣಾಯಕ. ಹೀಗಾಗಿ ಅಹಿಂದ, ಸಂವಿಧಾನದ ಪುಸ್ತಕ ಹಿಡಿದು ಮಾತನಾಡುವ ಕಾಂಗ್ರೆಸ್ ನಾಯಕರು ಸಾಮಾಜಿಕ ನ್ಯಾಯ ಪರಿಪಾಲನೆ ಮಾಡಬೇಕು. ಒಂದುವೇಳೆ ಈ ಬಾರಿಯೂ ನಮ್ಮ ಸಮುದಾಯದವರಿಗೆ ಸ್ಥಾನಮಾನ ನೀಡದಿದ್ದಲ್ಲಿ ೨೦೨೮ ರ ಚುನಾವಣೆಗೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡ ನಿಂಬಣ್ಣಮಡಿವಾಳ ಮಾತನಾಡಿ, ಮಡಿವಾಳ ಸಮಾಜವನ್ನು ನೋಟೆಡ್ ಮಾಡಿ ಬರಿ ಬೆಂಗಳೂರು ಮತ್ತು ಮೈಸೂರಿಗೆ ರಾಜಕೀಯ ಅಕಾರ ಹಂಚಿಕೆ ಆಗುತ್ತದೆ. ಮಡಿವಾಳರ ಪ್ರತಿನಿ ಅಕಾರ ಬೆಂಗಳೂರಿಗೆ ಸೀಮಿತವಾಗಿದೆ. ಅದನ್ನು ಇತರೆ ಜಿಲ್ಲೆಗೆ ವಿಸ್ತರಿಸಬೇಕು ಎಂದರು. ಚಿತ್ರದುರ್ಗದ ಮಡಿವಾಳ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಮಡಿವಾಳ ಸಮಾಜವನ್ನು ಎಸ್ಸಿ ಪಟ್ಟಿಗೆ ಸೇರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯಗತವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಡಿವಾಳ ಸಮಾಜದ ಮುಖಂಡರಾದ ಶಿವಮೂರ್ತಿ, ಮಂಜು, ಮಾಧುರಾಜು, ಬಸವರಾಜು, ಅಂಜು ಮತ್ತಿತರರಿದ್ದರು.

Tarikere Gopikrishna should be given the MLC seat.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...