Home namma chikmagalur chikamagalur ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
chikamagalurHomeLatest Newsnamma chikmagalur

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Share
Share

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ಜುಲೈ 5, 2026ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ. ಕಂಫರ್ಟ್ಸ್ (RC Comforts) ಕಟ್ಟಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆರೋಗ್ಯ ಬೈ ಆರ್ ವಿ ಆರ್ ನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ಆರೋಗ್ಯ ಜಾಗೃತಿ ಮೂಡಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ನಾಗರಿಕರು ಶಿಬಿರದ ಪ್ರಯೋಜನ ಪಡೆದು, ಆರೋಗ್ಯ ಸೇವೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಮಾರೋಪದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ RVR ಹೆಲ್ತ್ ಕೇರ್‌ನ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು ಹಾಗೂ ಸಂಸದರು ಉಪಸ್ಥಿತರಿದ್ದು ಶಿಬಿರಕ್ಕೆ ಶುಭ ಹಾರೈಸಿದರು.

ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರು ಮಾತನಾಡಿ, “ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದರೆ ಪರಿಣಾಮಕಾರಿ ಚಿಕಿತ್ಸೆ ಸಾಧ್ಯ. ಸಾರ್ವಜನಿಕರು ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಅವರು, “ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮ ಪ್ರಮುಖ ಧ್ಯೇಯವಾಗಿದೆ. ಪ್ರತಿಯೊಬ್ಬ ನಾಗರಿಕರೂ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಇದೇ ಉದ್ದೇಶದಿಂದ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುತ್ತಿದೆ” ಎಂದು ಹೇಳಿದರು.

ಶಿಬಿರವನ್ನು ಯಶಸ್ವಿಗೊಳಿಸಿದ ವೈದ್ಯರು, ಸಿಬ್ಬಂದಿ, ಸ್ವಯಂಸೇವಕರು, ಜನಪ್ರತಿನಿಧಿಗಳು ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ Arogya by RVR ಹೆಲ್ತ್ ಕೇರ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದಾಗಿ ಸಂಸ್ಥೆ ತಿಳಿಸಿದೆ.

Free health check-up camp a success

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...