Home namma chikmagalur chikamagalur ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ
chikamagalurCrime NewsHomeLatest Newsnamma chikmagalur

ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯದ ವ್ಯಾಪ್ತಿಯ ಹೊಸ ತೋಟ ಪ್ರದೇಶದ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿದೆ.

ಪ್ರಾಥಮಿಕ ಮಾಹಿತಿಯಂತೆ, ಹುಲಿಯು ಸುಮಾರು ಒಂದು ದಿನದ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಹಿರಿಯ ಅಧಿಕಾರಿಗಳೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಗಳ ಪ್ರಕಾರ ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗಲಿದ್ದು, ಹುಲಿಯ ಸಾವಿಗೆ ನಿಖರ ಕಾರಣ ಪರೀಕ್ಷಾ ವರದಿಯ ಬಳಿಕವೇ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ, ಹುಲಿಯ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ, ಅದು ಸಹಜ ಸಾವೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ. ತಪ್ಪಿತಸ್ಥರು ಇದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದೆ.

Dead body of male tiger found in coffee plantation

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...