Home namma chikmagalur chikamagalur ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ
chikamagalurHomeLatest Newsnamma chikmagalur

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

Share
Share

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪಿಳ್ಳೇನಹಳ್ಳಿಯಲ್ಲಿ ಸುಮಾರು ೬೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗೆ ಆದ್ಯತೆ. ಈ ಕರ್ತವ್ಯವನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತೇವೆಯೋ ಆಗ ಜನರು ನಮ್ಮನ್ನು ಗುರುತು ಮಾಡುತ್ತಾರೆ ಎಂದರು.

ಶಿಕ್ಷಣಕ್ಕೆ ಆದ್ಯತೆ ನೀಡಿ ಹೋಬಳಿ ಮಟ್ಟದಲ್ಲಿ ಕೆಪಿಎಸ್ ಶಾಲೆಗಳ ತೆರೆಯಬೇಕೆಂದು ಈಗಾಗಲೇ ಸಖರಾಯಪಟ್ಟಣದಲ್ಲಿ ಸುಮಾರು ೪ ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆ ಮಂಜೂರಾಗಿದೆ. ಸದ್ಯದಲ್ಲೇ ಕೆಲಸ ಆರಂಭವಾಗಲಿದೆ. ದೇವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೋಟಿ ರು. ವೆಚ್ಚದಲ್ಲಿ ಇಡೀ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ಬಾರಿ ಲಕ್ಯಾ ಹೋಬಳಿಯ ಕೆ.ಬಿ. ಹಾಳ್ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲಿ ತಾಯಿ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದು ವರ್ಷದೊಳಗೆ ಪ್ರಾರಂಭ ಮಾಡುತ್ತೇವೆ ಎಂದರು. ಯುದ್ಧದಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆದರೆ, ಇಲ್ಲಿನ ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಿಲ್ಲ. ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ.

ಇಂತಹ ಬೆಲೆ ಏರಿಕೆಗಳ ನಡುವೆ ಸಾಮಾನ್ಯ ಜನರ ಬದುಕನ್ನು ಕಟ್ಟಿಕೊಡಲು ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಹಾಗೂ ಈಗಿನ ಸಿಎಂ ಡಿ.ಕೆ. ಶಿವಕುಮಾರ್ ಕೊಟ್ಟಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಧ್ಯವಾಗಿದೆ ಎಂದ ಶಾಸಕರು, ಜಿಲ್ಲೆಗೆ ೩೮ ಆಯುಷ್ಮಾನ್ ಆರೋಗ್ಯ ಕೇಂದ್ರ ಮಂಜೂರಾಗಿದ್ದು ಈ ಪೈಕಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ೧೧ ಕೇಂದ್ರಗಳು ಮಂಜೂರಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಸದಸ್ಯ ಲೋಕೇಶ್, ಶ್ರೀರಂಗನಾಥ ಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷರಾದ ಬಸವರಾಜ್, ಕೃಷ್ಣಮೂರ್ತಿ ಸಂತೋಷ್, ಲಕ್ಷ್ಮಣ್, ಗ್ರಾಮ ಪಂಚಾಯ್ತಿ ಸದಸ್ಯರಾದ ವಿನೋದ್ ಉಪಸ್ಥಿತರಿದ್ದರು.

Kudali Puja for Ayushman Health Center work

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...

ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯದ ವ್ಯಾಪ್ತಿಯ...