Home namma chikmagalur chikamagalur ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ
chikamagalurHomeLatest Newsnamma chikmagalur

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

Share
Share

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಹಂಡುಗುಳಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಲಾರಿಯೊಂದರಲ್ಲಿ ಮರದ ದಿಮ್ಮಿಗಳನ್ನು ತುಂಬಿ ನಿಲ್ಲಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಲಾರಿಯಲ್ಲಿ ಕಾಡುಜಾತಿಯ ಮರಗಳ ದಿಮ್ಮಿಗಳು ಗಳು ಪತ್ತೆಯಾದವು.

ಲಾರಿಯಲ್ಲಿದ್ದ ಚಿಕ್ಕಮಗಳೂರು ತಾಲ್ಲೂಕಿನ ಹೊಸಕೋಟೆ ಗ್ರಾಮದ ರಂಗರಾಜು ಅವರನ್ನು ವಿಚಾರಣೆ ನಡೆಸಿದಾಗ, ಸಾಗಿಸಲಾಗುತ್ತಿದ್ದ ಮರದ ದಿಮ್ಮಿಗಳು ಶಿವಪ್ಪ, ಪ್ರಕಾಶ್ ಹಾಗೂ ಇತರರಿಗೆ ಸೇರಿದ್ದು, ಸಾಗಾಣಿಕೆಗೆ ಅಗತ್ಯವಾದ ರಹದಾರಿ (ಪರವಾನಗಿ) ಇಲ್ಲ ಎಂಬುದು ಗೊತ್ತಾಯಿತು.

ಅಧಿಕಾರಿಗಳು ಮರದ ದಿಮ್ಮಿಗಳನ್ನು ಹಾಗೂ ಲಾರಿಯನ್ನು ವಶಕ್ಕೆ ಪಡೆದು, ರಂಗರಾಜು, ಹಳೆಮೂಡಿಗೆರೆಯ ಶಿವಪ್ಪ, ಮುತ್ತಿಗೆಪುರದ ಪ್ರಕಾಶ್, ಆನೆದಿಬ್ಬದ ಚಂದ್ರಶೇಖ‌ರ್, ಜೋಗಣ್ಣಕೆರೆಯ ರಘು ಹಾಗೂ ಹಳೆಕೋಟೆಯ ಚಂದ್ರಶೇಖರ್ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಡಿಎಫ್‌ಒ ಕೆ.ಟಿ. ಬೋರಯ್ಯ ಹಾಗೂ ಎಸಿಎಫ್ ಆಕರ್ಷ್ ಮಾರ್ಗದರ್ಶನದಲ್ಲಿ ಆರ್‌ಎಫ್‌ಒ ಮಂಜುನಾಥ್, ಡಿಆರ್‌ಎಫ್‌ಒ ಕೆ.ಎಸ್. ಅಶ್ವತ್, ಎಸ್.ಡಿ. ದೀಪಕ್, ಗಸ್ತು ಅರಣ್ಯ ಪಾಲಕರಾದ ಅಭಿಜಿತ್, ಆದರ್ಶ್, ಮನು ಹಾಗೂ ವಾಹನ ಚಾಲಕರಾದ ನವರಾಜ್ ಮತ್ತು ಸುಮಂತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Illegally transported and seized logs of wild species of trees

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ...