Home namma chikmagalur chikamagalur ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ
chikamagalurHomeLatest Newsnamma chikmagalur

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

Share
oplus_161480704
Share

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧ ರಂದು ಮಂಗಳವಾರ ಬೆಳಗ್ಗೆ ೧೧ಕ್ಕೆ ಬಲ್ಡೋಟಾ ಕಂಪನಿ ಗೇಟ್ ಎದುರು ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಅವರು ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ನರಗುಂದ, ನವಲಗುಂದ ರೈತ ಬಂಡಾಯ ನಡೆದು ೪೬ ವರ್ಷಗಳು ತುಂಬುತ್ತಿರುವ ಈ ಚಾರಿತ್ರಿಕ ಹಿನ್ನೆಲೆಯಲ್ಲಿ ರೂಪುಗೊಂಡ ರೈತ ಚಳುವಳಿ ರಾಜ್ಯದಲ್ಲೇ ಹಲವಾರು ಐತಿಹಾಸಿಕ ಹೋರಾಟಗಳನ್ನು ನಡೆಸಿ ದೇಶವ್ಯಾಪಿ ವಿಸ್ತರಿಸಿ ಗಡಿಯನ್ನು ದಾಟಿ ಪ್ರಪಂಚದ ನಾನಾ ದೇಶಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದರು.

ಕೇಂದ್ರ ಸರ್ಕಾರದ ಹೊಸ ಆರ್ಥಿಕ ನೀತಿ, ಉದಾರೀಕರಣ, ಮುಕ್ತ ಮಾರುಕಟ್ಟೆ ನೀತಿಗಳು ರೈತಕುಲದ ಅಸ್ತಿತ್ವಕ್ಕೆ ಗಂಡಾಂತರ ತಂದಿದೆ. ದೇಶದ ೧೪೦ ಕೋಟಿ ಜನರಿಗೆ ಆಹಾರ ಭದ್ರತೆಯನ್ನು ಒದಗಿಸುವ ಕೃಷಿ ಕ್ಷೇತ್ರವನ್ನು ಎಲ್ಲಾ ಸಂಕಷ್ಟಗಳಿಂದ ಕೊನೆಗಾಣಿಸಿ ರೈತ ಸಮುದಾಯವನ್ನು ಉಳಿಸಿಕೊಳ್ಳಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಮನವಿ ಮಾಡಿದರು.

ಕೊಪ್ಪಳದ ಭಾಗ್ಯ ನಗರದಲ್ಲಿ ೧.೫ ಲಕ್ಷ ಜನರ ಜೀವನಕ್ಕೆ ಕಂಠಕವಾಗಿರುವ ಬಲ್ಡೋಟಾ ಕಾರ್ಖಾನೆಯನ್ನು ಸಾರಾ ಸಗಟಾಗಿ ವಿರೋಧಿಸಿ ಕಳೆದ ಫೆಬ್ರವರಿ ೨೫ ರಿಂದ ೨೨ ಹಳ್ಳಿಗಳ ಜನರು ನಿರಂತರ ಹೋರಾಟ ಮಾಡುತ್ತಿದ್ದು, ಕೊಪ್ಪಳ ಜಿಲ್ಲೆ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಸಮಿತಿ ನಿರಂತರವಾಗಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಎರಡು ಬಾರಿ ಕೊಪ್ಪಳ ಬಂದ್ ಮಾಡಲಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ಬಂದು ಹೋರಾಟ ನಡೆಸಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಸತ್ಯಾಗ್ರಹ ನಡೆಸಲಾಗಿದೆ ಎಂದು ವಿವರಿಸಿದರು.

ಈ ಹೋರಾಟದ ಫಲವಾಗಿ ೨ ಕಾರ್ಖಾನೆಗಳನ್ನು ಪರಿಸರ ಇಲಾಖೆ ಮುಚ್ಚಿಸಿದೆ. ಇನ್ನೂ ೩ ಕಾರ್ಖಾನೆಗಳಿಗೆ ಮುಚ್ಚುವವ ನೋಟೀಸ್ ನೀಡಲಾಗಿದೆ. ೧೪ ಮಾಲಿನ್ಯ ಮಾಡುತ್ತಿರುವ ಕಾರ್ಖಾನೆಗಳ ಮೇಲಸ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದ ಅವರು ಮುಂಗಾರು ಮಳೆಯ ವೈಫಲ್ಯದಿಂದಾಗಿ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.

ಕಾಡಂಚಿನ ಗ್ರಾಮಗಳ ಜನರ ಜೀವನಕ್ಕೆ ಕಂಠಕವಾಗಿರುವ ಕಾಡು ಪ್ರಾಣಿಗಳ ಹಾವಳಿ ತಡೆಗೆ ಹಾಗೂ ಬೆಳೆಹಾನಿ ತಪ್ಪಿಸುವಂತೆ ರೈತ ಸಂಘ ಹೋರಾಟ ಮಾಡುತ್ತಿದ್ದು, ಕೂಡಲೇ ಸರ್ಕಾರ ಆನೆ ಹಾವಳಿ ತಡೆಗೆ ರೈಲ್ವೇ ಬ್ಯಾರಿಕೇಡ್, ಟಿಂಟ್‌ಕಲ್ ಬೇಲಿ ನಿರ್ಮಾಣ ಮಾಡಬೇಕು. ಹಾನಿಯಾಗಿರುವ ಬೆಳೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳಿಂದ ಮೃತಪಟ್ಟವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಜನಸಾಮಾನ್ಯರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್, ಬಿಜೆಪಿ, ಜನತಾದಳ ಈ ಮೂರು ಪಕ್ಷಗಳು ವಿಫಲವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ಪರ್ಯಾಯ ಪಕ್ಷ ಕಟ್ಟಲು ಹಾಗೂ ನೆಲ, ಜಲ, ಭಾಷೆಗಳ ಉಳಿವಿಗಾಗಿ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಚಿಂತನೆಯೊಂದಿಗೆ ಹೊಸ ಪರ್ಯಾಯ ಪಕ್ಷವನ್ನು ಹುಟ್ಟುಹಾಕುವ ನಿಟ್ಟಿನಲ್ಲಿ ರೈತ ಚಳುವಳಿ, ದಲಿತ ಚಳುವಳಿ, ಪ್ರಗತಿಪರ ಚಳುವಳಿಗಳು ಸಂಯುಕ್ತ ರಂಗ ಸೇರಿದಂತೆ ಸರ್ವೋದಯ ಕರ್ನಾಟಕ ಪಕ್ಷ ಸ್ಥಾಪಿಸಲು ಮುಂದಾಗಿದೆ ಎಂದರು.

ಮುಂದಿನ ಜಿಲ್ಲಾ ಪಂಚಾಯಿತಿ ಚುನಾವಣೆಯೂ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಸರ್ವೋದಯ ಪಕ್ಷ ಸ್ಫರ್ದೆ ಮಾಡಲಿದ್ದು, ಸರ್ವರೂ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, ಪಕ್ಷ ಸಂಘಟನೆಗೆ ಇಂದೂದರ ಹೊನ್ನಾಪುರ, ಹುಲಿಕೆರೆ ಮಹದೇವ, ಗುರುಪ್ರಸಾದ್ ಕೆರಗೋಡು, ಮುನಿಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಚಾಮರಸ ಮುಂತಾದವರು ನೇತೃತ್ವ ವಹಿಸಲಿದ್ದಾರೆಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನೇತ್ರಾವತಿ ಮಾಜಿ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಮಂಜುನಾಥ್, ಉಪಸ್ಥಿತರಿದ್ದರು.

Huge farmers’ convention in Koppal on July 21st

Share

Leave a comment

Leave a Reply

Your email address will not be published. Required fields are marked *

Don't Miss

ಕ್ಷೌರಿಕ ಮೂಲ ವೃತ್ತಿಯನ್ನು ಉತ್ತೇಜಿಸುವ ಕಾರ್ಯ ಮಾಡಿ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನೇಕ ಬಲಾಡ್ಯ ಕಂಪನಿಗಳು ಮು ಂದಾಗಿವೆ. ಈ ಮೂಲ ವೃತ್ತಿದಾರರು ಕುಲಕಸುಬನ್ನು ತ್ಯಜಿಸದೇ, ಉತ್ತೇಜಿಸುವ ನಿಟ್ಟಿನಲ್ಲಿ ತಂತ್ರಗಾರಿಕೆ ಬಳ ಸಿ ಕ್ಷೌರಿಕ ಉದ್ಯಮವನ್ನು ವೃದ್ದಿಸಬೇಕು ಎಂದು...

ಅನುಸೂಚಿತ ಜಾತಿ-ಬುಡಕಟ್ಟುಗಳ ಆಯೋಗದ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ

ಚಿಕ್ಕಮಗಳೂರು : ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ರಾಜ್ಯ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ...

Related Articles

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ...

ಖಾಯಂ ಹಕ್ಕುಪತ್ರಕ್ಕೆ ವಿವೇಕಾನಂದ ಯುವಕ ಸಂಘ ಆಗ್ರಹ

ಚಿಕ್ಕಮಗಳೂರು: ನಗರದ 18ನೇ ವಾರ್ಡ್ ವ್ಯಾಪ್ತಿಯ ಕಲ್ಲೊಡ್ಡಿ-ಶಾಂತಿನಗರ ಪ್ರದೇಶ ಗ್ರಾಮವಾಗಿ ನಿರ್ಮಾಣಗೊಂಡು 37 ವರ್ಷ ಕಳೆದರೂ...

ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಸಲು ಕಿಸಾನ್ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಬರಪೀಡಿತ ತಾಲೂಕುಗಳ ಘೋಷಣೆಯನ್ನು ಹಂತ-ಹಂತವಾಗಿ ಕೈಗೊಳ್ಳುತ್ತಿರುವ ಸರ್ಕಾರವು...