Home namma chikmagalur chikamagalur ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸನ್ನದ್ಧರಾಗಿ ಸೂಚನೆ
chikamagalurHomeLatest Newsnamma chikmagalur

ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸನ್ನದ್ಧರಾಗಿ ಸೂಚನೆ

Share
Share
ಚಿಕ್ಕಮಗಳೂರು: ಬರ ಪರಿಸ್ಥಿತಿ ಎದುರಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ  ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಡಿಸೆಂಬರ್ ನಂತರ ಕೆಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಈಗಿನಿಂದಲೇ ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು. ಮುಂದಿನ ಸಭೆಯ ವೇಳೆಗೆ ಇದಕ್ಕೆ ಆದ್ಯತೆ ನೀಡಿ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ ನೂತನವಾಗಿ ’ಪ್ರಜಾಸೇವಾ ಇಲಾಖೆ’ ಸ್ಥಾಪನೆಯಾಗಿದ್ದು, ಈ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಶೀಘ್ರದಲ್ಲೇ ಪರಿಶೀಲನೆ ಆರಂಭಿಸಲಾಗುವುದು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯ ಆಪ್ ಹಾಜರಾತಿಯನ್ನು ಬಳಸಬೇಕು. ನಮ್ಮ ಜಿಲ್ಲೆಯ ಕರ್ತವ್ಯ ಆಪ್ ಬಳಕೆ ಸದ್ಯ ಶೇ.೫೦ ರಷ್ಟಿದ್ದು, ಎಲ್ಲಾ ಉಪನಿರ್ದೇಶಕರುಗಳು ತಮ್ಮ ಕಚೇರಿಗಳಲ್ಲಿ ಇದನ್ನು ಕಡ್ಡಾಯಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ಕಡ್ಡಾಯವಾಗಿ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಇದರಲ್ಲಿ ಸಾರ್ವಜನಿಕರಿಗೆ ಲಂಚ ನೀಡದಂತೆ ಜಾಗೃತಿ ಮೂಡಿಸುವ ಬರಹ, ದೂರು ಸಲ್ಲಿಸಬೇಕಾದ ಸಹಾಯವಾಣಿ ಸಂಖ್ಯೆ ಹಾಗೂ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿರುವ ಸಮಯದ ಮಾಹಿತಿ ಇರಬೇಕು. ಕಚೇರಿಗಳಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಜನರು ಉದ್ಯೋಗ ಅರಸಿ ಬೇರೆಡೆಗೆ ವಲಸೆ ಹೋಗಬಾರದು. ಇದನ್ನು ತಡೆಯಲು ವಿಬಿ ಜಿ ರಾಮ್ ಜಿ (ನರೇಗಾ) ಯೋಜನೆ ಅಡಿಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಕೃಷಿ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಪರ್ಯಾಯ ಆದಾಯ ತರುವಂತಹ ಕೆಲಸಗಳನ್ನು ಒದಗಿಸಿ, ಅವರನ್ನು ಜಿಲ್ಲೆಯಲ್ಲೇ ಉಳಿಸಿಕೊಳ್ಳುವತ್ತ ಗಮನಹರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬೆಳೆವಿಮೆಗೆ ಸಂಬಂಧಿಸಿದಂತೆ ಇನ್ಶೂರೆನ್ಸ್ ಕಂಪನಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೆರೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಕೆರೆಗಳ ನೀರಿನ ಮಟ್ಟ ಹಾಗೂ ತಾಂತ್ರಿಕ ಸ್ಥಿತಿಗತಿಗಳ ಬಗ್ಗೆ ನಿಖರವಾದ ಮಾಹಿತಿ ಪಡೆದು, ಕ್ರಾಸ್ ವೆರಿಫೈ ಮಾಡಬೇಕು. ಜಿಲ್ಲೆಯಿಂದ ಸರ್ಕಾರಕ್ಕೆ ಹೋಗುವ ಪ್ರತಿಯೊಂದು ಮಾಹಿತಿಯೂ ಅತ್ಯಂತ ನಿಖರವಾಗಿರಬೇಕು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಶೇ.೪೪ರಷ್ಟು ಮಳೆ ಕೊರತೆ:  ಜಿಲ್ಲೆಯಲ್ಲಿ ಮುಂಗಾರು ಮಳೆಯು ಸದ್ಯ ಶೇ.೪೪ ರಷ್ಟು ಕೊರತೆಯಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಹೊಡೆತ ಬಿದ್ದಿದೆ. ಜಿಲ್ಲೆಯ ಒಟ್ಟು ಬಿತ್ತನೆ ಗುರಿಯಲ್ಲಿ ಕೇವಲ ೫,೬೪೭ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ಇದು ಕೇವಲ ಶೇ.೬ ರಷ್ಟು ಪ್ರಗತಿಯನ್ನು ತೋರಿಸುತ್ತದೆ. ಬರ ನಿರ್ವಹಣೆ ಕುರಿತಂತೆ ’ಗ್ರೌಂಡ್ ಟ್ರೂಥಿಂಗ್’ ಬೆಳೆ ಸಮೀಕ್ಷೆ ಕೈಗೊಳ್ಳುವ ಸಂಬಂಧ ಮಾಹಿತಿ ನೀಡಿದರು.
ಸದ್ಯ ತೀವ್ರ ನೀರಿನ ಅಭಾವವಿರುವ ೮ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ೧೮ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದರು. ಜಾನುವಾರುಗಳಿಗೆ ಮುಂದಿನ ೩೦ ವಾರಗಳವರೆಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಜಿಲ್ಲೆಯಲ್ಲಿದೆ. ಇದರೊಂದಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಹಿತಿ ನೀಡಲಾಯಿತು. ಜಿಲ್ಲೆಯ ಜಲಾಶಯದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಮಾತ್ರ ಒದಗಿಸಲಾಗುವುದು ಎಂದು ಸಾರ್ವಜನಿಕರಿಗೆ ಮಾಹಿತಿ ತಿಳಿಸಲಾಗಿದೆ ಎಂದರು.
ಮುಂಗಾರು ಮಳೆಯಿಂದ ಉಂಟಾಗಬಹುದಾದ ಮಳೆ ಹಾನಿ, ಬೆಳೆ ಹಾನಿ, ಭೂಕುಸಿತ ಹಾಗೂ ಇತರೆ ವಿವರಗಳನ್ನು ಸಭೆಗೆ ಮಾಹಿತಿ ನೀಡಲಾಯಿತು. ವಿಬಿ-ಜಿ ರಾಮ್-ಜಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು  ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವುದು ಮತ್ತು ಕೂಲಿಗಾಗಿ ಸಾರ್ವಜನಿಕರು ವಲಸೆ ಹೋಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಉಪವಿಭಾಗಾಧಿಕಾರಿ ನಟೇಶ್‌ಸಸಸ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಂ.ತಿರುಮಲೇಶ್, ತೋಟಗಾರಿಕೆ ಉಪನಿರ್ದೇಶಕಿ ಮಂಗಳ, ಸೇರಿದಂತೆ ತಾಲ್ಲೂಕು ತಹಸೀಲ್ದಾರರು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Instructions to be prepared to respond quickly to public issues
Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು....

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...