Home namma chikmagalur chikamagalur ಮೂಡಿಗೆರೆಯಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ
chikamagalurCrime NewsHomeLatest Newsnamma chikmagalur

ಮೂಡಿಗೆರೆಯಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ಮೂಡಿಗೆರೆ ಪೊಲೀಸರು ದಾಳಿ ನಡೆಸಿ, ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜುಲೈ 17ರಂದು ರಾತ್ರಿ 8.10ರ ಸುಮಾರಿಗೆ ಮೂಡಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ (ತನಿಖೆ) ಶಶಿ ಟಿ.ಕೆ. ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಸಿಬ್ಬಂದಿಯೊಂದಿಗೆ ಛತ್ರಮೈದಾನದ ವಾಟರ್‌ಮ್ಯಾನ್ ಲೋಕೇಶ್ ಅವರ ಮನೆಯ ಹಿಂದಿನ ಖಾಲಿ ಜಾಗದ ಮೇಲೆ ದಾಳಿ ನಡೆಸಲಾಯಿತು.

ದಾಳಿಯ ವೇಳೆ ಎಂಟು ಮಂದಿ ನೆಲದ ಮೇಲೆ ಬೆಡ್‌ಶೀಟ್ ಹಾಸಿಕೊಂಡು ಹಣವನ್ನು ಪಣಕ್ಕಿಟ್ಟು ಅಂದರ್-ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ 52 ಇಸ್ಪೀಟು ಎಲೆಗಳು, ₹920 ನಗದು, ಒಂದು ಪಿಂಕ್-ಬೂದು ಬಣ್ಣದ ಬೆಡ್‌ಶೀಟ್ ಹಾಗೂ ಬೆಳಕಿಗೆ ಬಳಸುತ್ತಿದ್ದ ಚಾರ್ಜರ್ ಲೈಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳನ್ನು ಪಂಚರ ಸಮಕ್ಷಮದಲ್ಲಿ ಮಹಜರು ನಡೆಸಿ ಸೀಲ್ ಮಾಡಲಾಗಿದೆ.

ಪ್ರಕರಣದಲ್ಲಿ ಲೋಕೇಶ್, ಅಬೂಬಕರ್, ಇಬ್ರಾಹಿಂ, ಅನಿಲ್ ಕುಮಾರ್, ಇರ್ಫಾನ್, ಮುಸ್ತಾಕ್, ಅಶ್ವಥ್ ಹಾಗೂ ತೇಜಸ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಆರೋಪಿಗಳನ್ನಾಗಿ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ನಂತರ ಠಾಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದ್ದು, ಸ್ಥಳದಲ್ಲಿಯೇ ಬಿಡುಗಡೆ ಮಾಡಲಾಗಿದೆ.

ಪೊಲೀಸರು ಮೊದಲಿಗೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರಡಿ ಅಸಂಜ್ಞೇಯ (ಎನ್‌ಸಿ) ಪ್ರಕರಣ ದಾಖಲಿಸಿ ನ್ಯಾಯಾಲಯದ ಅನುಮತಿ ಕೋರಿದ್ದರು. ಬಳಿಕ ನ್ಯಾಯಾಲಯದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ ಜುಲೈ 18ರಂದು ಆರೋಪಿಗಳ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Police raid on illegal Andar-Bahar gambling in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು....

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...