Home namma chikmagalur chikamagalur ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ
chikamagalurHomeLatest Newsnamma chikmagalur

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

Share
Share

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ. ಶ್ರೀ ರಾಮನ ಹೆಸರಲ್ಲಿ ಲೂಟಿ ಮಾಡಿರುವ ಟ್ರಸ್ಟ್ ಆಡಳಿತ ಮುಖ್ಯಸ್ಥನ ವಿರುದ್ಧ ತನಿಖೆ ನಡೆಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ವಕ್ತಾರ ಮಹೇಶ್ವರಪ್ಪ ಆಗ್ರಹಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಯೋದ್ಯೆ ಶ್ರೀ ರಾಮಮಂದಿರ ಭೂಮಿ ಪೂಜೆಯಿಂದ ಹಿಡಿದು ಉದ್ಘಾಟನೆವರೆಗೂ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕಾಗಿ ಬಳಸಿಕೊಂಡರು. ಆದರೆ, ಈಗ ಕೋಟ್ಯಂರ ರೂ. ಲೂಟಿಯಾಗಿದ್ದರೂ ಇದುವರೆಗೆ ಪ್ರಧಾನಿ ಮೋದಿ ಅವರು ಮೌನವಹಿಸಿದ್ದಾರೆ ಎಂದು ದೂರಿದರು.

ಅಯೋದ್ಯೆ ಶ್ರೀರಾಮನ ಟ್ರಸ್ಟ್‌ನ ಪ್ರಮುಖರು ನೀಡಿದ ರಾಜೀನಾಮ ಇನ್ನೂ ಅಂಗೀಕಾರವಾಗಿಲ್ಲ. ಎಸ್‌ಐಟಿ ವರದಿಯಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳನ್ನು ಬಿಟ್ಟು ಕಾರು ಚಾಲಕ, ಸೆಕ್ಯೂರಿಟಿಗಾರ್ಡ್, ಹುಂಡಿ ಎಣಿಕೆ ಸಿಬ್ಬಂದಿ ಸೇರಿ ೬ ಜನರ ಹೆಸರನ್ನು ಮಾತ್ರ ಸೇರಿಸಲಾಗಿದೆ. ಈ ತನಿಖಾ ವರದಿಯೂ ಪಾರದರ್ಶಕವಾಗಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ಕೂಡಲೇ ಬಹಿರಂಗಪಡಿಸಬೇಕು. ಸುಪ್ರೀಂಕೋರ್ಟಿನ ನ್ಯಾಯಾಶರ ಮೇಲ್ವಿಚಾರಣೆಯಲ್ಲಿಪಾರದರ್ಶಕ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಮಾತನಾಡಿ, ಬಿಜೆಪಿ ಸರಕಾರ ಅಕಾರಕ್ಕೆ ಬಂದಾಗಿನಿಂದ ೧೫೨ ಬಾರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ. ಅದರ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರಧಾನ್ ಅಕಾರಕ್ಕೆ ಅಂಟಿಕೂತಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿರುವ ಕೇಂದ್ರ ಬಿಜೆಪಿ ಸರಕಾರ ಅನೇಕ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದಿದೆ. ಈ ಕೂಡಲೇ ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ನಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮುಖಂಡರಾದ ಚಂದ್ರು, ಗಂಗಾಧರ ಮತ್ತಿತರರಿದ್ದರು.

Ayodhya money theft should be investigated transparently by the Supreme Court

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ...