Home namma chikmagalur chikamagalur ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
chikamagalurHomeLatest Newsnamma chikmagalur

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Share
Share

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ನರಿಗುಡ್ಡನಹಳ್ಳಿ ಸರ್ಕಲ್ ಸಮೀಪದಲ್ಲಿರುವ ಈ ವಸತಿ ಶಾಲೆಯಲ್ಲಿ ಸುಮಾರು 190 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಗ್ಗಟ್ಟಾಗಿ ತರಗತಿಯಿಂದ ಹೊರಬಂದು ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ.

ವಸತಿ ಶಾಲೆಯ ವಾರ್ಡನ್ ಸವಿತಾ ಅವರ ಬೇಜವಾಬ್ದಾರಿ ನಡವಳಿಕೆಗೆ ವಿದ್ಯಾರ್ಥಿಗಳು ಸಂಪೂರ್ಣ ಬೇಸತ್ತಿದ್ದಾರೆ. ವಿದ್ಯಾರ್ಥಿಗಳು ಅರೆಬೆಂದ ಚಿಕನ್ ಸೇರಿದಂತೆ ಕಳಪೆ ಗುಣಮಟ್ಟದ ಆಹಾರ ಸೇವಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರೂ ವಾರ್ಡನ್ ಕ್ಯಾರೆ ಎಂದಿಲ್ಲ. ಇದರ ಜೊತೆಗೆ ಸರ್ಕಾರದಿಂದ ವಸತಿ ಶಾಲೆಯ ಮಕ್ಕಳಿಗೆ ತಲುಪಬೇಕಾದ ಸಾಮಗ್ರಿಗಳು ಮತ್ತು ಅಗತ್ಯ ಪರಿಕರಗಳು ದುರ್ಬಳಕೆಯಾಗುತ್ತಿವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಗಂಭೀರವಾಗಿ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ, ಶೈಕ್ಷಣಿಕ ಪ್ರವಾಸಕ್ಕಾಗಿ ಸರ್ಕಾರದಿಂದ ಪೂರ್ಣ ಪ್ರಮಾಣದ ಹಣ ಬಿಡುಗಡೆಯಾಗಿದ್ದರೂ ಸಹ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ...