Home namma chikmagalur chikamagalur ಪೊಲೀಸ್ ಕರ್ತವ್ಯಕ್ಕೆ ಅಡ್ಡಿ- ಮೂವರ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ
chikamagalurCrime NewsHomeLatest Newsnamma chikmagalur

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ- ಮೂವರ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ

Share
Share

ಕೊಪ್ಪ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದವರನ್ನು ಸಮಾಧಾನಪಡಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಫೋನ್ ಕಸಿದು ನೆಲಕ್ಕೆ ಒಡೆದು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಒಬ್ಬ ಯುವಕ ಸೇರಿದಂತೆ ಮೂವರ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 21ರಂದು ಸಂಜೆ ಸುಮಾರು 5 ಗಂಟೆಗೆ ಕೊಪ್ಪ ಪೊಲೀಸ್ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಸಿಪಿಸಿ 701 ಪ್ರಕಾಶ್ ಅವರು ಮಫ್ತಿ ಉಡುಪಿನಲ್ಲಿ ಬಸ್ ನಿಲ್ದಾಣದ ಸುತ್ತಮುತ್ತ ರೌಂಡ್ಸ್ ನಡೆಸುತ್ತಿದ್ದರು. ಈ ವೇಳೆ ಜೆಎಂಜೆ ಆಟೋ ನಿಲ್ದಾಣದ ಬಳಿ ಮೂವರು ಯುವಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡು, ಕೊರಳಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಳ್ಳುತ್ತಾ ಗಲಾಟೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರೆತಿದೆ.

ತಕ್ಷಣ ಸ್ಥಳಕ್ಕೆ ತೆರಳಿದ ಪ್ರಕಾಶ್ ಅವರು ತಾವು ಪೊಲೀಸ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡು ಗಲಾಟೆ ನಿಲ್ಲಿಸುವಂತೆ ಸೂಚನೆ ನೀಡಿದರೂ, ಯುವಕರು ಅದನ್ನು ಲೆಕ್ಕಿಸದೆ ಮತ್ತೆ ಜಗಳ ಮುಂದುವರಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕೆಂಪು ಬಣ್ಣದ ಟಿ-ಶರ್ಟ್ ಧರಿಸಿದ್ದ ಯುವಕನನ್ನು ಪ್ರಶ್ನಿಸಿದಾಗ ಆತ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ವಿಡಿಯೊ ಚಿತ್ರೀಕರಿಸಲು ಪ್ರಕಾಶ್ ಅವರು ತಮ್ಮ ಮೊಬೈಲ್ ತೆಗೆದಾಗ, ಆರೋಪಿತ ಯುವಕ ಮೊಬೈಲ್ ಕಸಿದು ನೆಲಕ್ಕೆ ಒಡೆದು ಹಾಕಿದ್ದಾನೆ. ಬಳಿಕ ಆತನೊಂದಿಗೆ ಇದ್ದ ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ವಶಕ್ಕೆ ಪಡೆದು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ವಿಚಾರಣೆ ವೇಳೆ ಆತ ತನ್ನ ಹೆಸರನ್ನು ನಿತಿನ್ (24), ನಾಗೇಶ್ ಅವರ ಪುತ್ರ, ನರಸೀಪುರ-ನಾರ್ವೆ ನಿವಾಸಿ ಎಂದು ತಿಳಿಸಿದ್ದಾನೆ.

ಬಳಿಕ ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಮೊಬೈಲ್ ಹಾನಿಗೊಳಿಸುವುದು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿದ ಆರೋಪದಡಿ ನಿತಿನ್ ಹಾಗೂ ಆತನೊಂದಿಗೆ ಇದ್ದ ಇನ್ನಿಬ್ಬರ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Obstruction of police duty – Case filed against three at Koppa police station

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...