Home namma chikmagalur chikamagalur ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ
chikamagalurCrime NewsHomeLatest Newsnamma chikmagalur

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

Share
Share

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ

ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ ನಿವಾಸಿಯೊಬ್ಬರು ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟುಕೊಂಡಿದ್ದ ಎರಡು ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿ ವಶಪಡಿಸಿಕೊಂಡಿದೆ.

ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಗಿಳಿಗಳನ್ನು ಸಾಕುತ್ತಿದ್ದ ಸುರೇಶ್ ಎಂಬಾತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮಿಂಚಿನ ದಾಳಿಯಲ್ಲಿ ಸುರೇಶ್ ವಶದಲ್ಲಿದ್ದ ಗಿಳಿಗಳನ್ನು ಪಂಜರದ ಸಹಿತ ವಶಕ್ಕೆ ಪಡೆಯಲಾಗಿದ್ದು, ಸೂಕ್ತ ಸಂರಕ್ಷಣೆಗಾಗಿ ಸ್ಥಳೀಯ ಆರ್‌ಎಫ್‌ಒ ಅವರ ಸುಪರ್ದಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ವರದಿಯನ್ನೂ ಸಲ್ಲಿಸಲಾಗಿದೆ.

ರಾಜ್ಯ ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಜಿ.ಸಂಗೀತ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜುರು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣರಾಜು ಅರಸ್, ಕೆ.ಎಸ್‌.ದಿಲೀಪ್, ಹೆಚ್.ನಟರಾಜ್, ಹಾಲೇಶ್, ಲೋಹಿತ್ ಸಿ.ಎಂ. ಹಾಗೂ ಚಾಲಕ ತಿಮ್ಮಶೆಟ್ಟಿ ಭಾಗವಹಿಸಿದ್ದರು.

CID police seize wild parrot kept in cage

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...