Home namma chikmagalur chikamagalur ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ
chikamagalurCrime NewsHomeLatest Newsnamma chikmagalur

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

Share
Share

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಪಾತೇನಗಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯನ್ನು ಶಿವಮ್ಮ (32) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಅವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಪಾತೇನಹಳ್ಳಿ ಗ್ರಾಮದ ಪಾಳುಬಿದ್ದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಶಿವಮ್ಮ ಅವರು ತೋಟದ ಮಾರ್ಗವಾಗಿ ಮತ್ತೊಂದು ಜಾಗಕ್ಕೆ ತೆರಳುತ್ತಿದ್ದ ವೇಳೆ, ಅವರ ಕೈಯಲ್ಲಿದ್ದ ತೆಂಗಿನಕಾಯಿಯನ್ನು ಗಮನಿಸಿದ ತೋಟದ ಮಾಲೀಕ ನವೀನ್, ಅದು ತಮ್ಮ ತೋಟದ್ದೇ ಎಂದು ಆರೋಪಿಸಿ ಜಗಳ ಆರಂಭಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ, “ನಾನು ಕರೆದಾಗ ಬರುವುದಿಲ್ಲ, ಈಗ ತೆಂಗಿನಕಾಯಿ ತೆಗೆದುಕೊಂಡು ಹೋಗುತ್ತೀಯಾ” ಎಂದು ನಿಂದಿಸುತ್ತಾ ನವೀನ್ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಬಳಿಕ ನವೀನ್ ಜೊತೆ ಕಲ್ಲೇಶ್ ಹಾಗೂ ದೀಪು ಕೂಡ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯ ವೇಳೆ ಮಹಿಳೆಯ ಬಟ್ಟೆ ಹರಿದು, ಅವರನ್ನು ನೆಲಕ್ಕೆ ತಳ್ಳಿಹಾಕಿ ತುಳಿದಿರುವ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ನವೀನ್, ಕಲ್ಲೇಶ್ ಹಾಗೂ ದೀಪು ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Woman attacked by three people on charges of stealing coconuts

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...