Home namma chikmagalur chikamagalur ಮೂಡಿಗೆರೆಯಲ್ಲಿ ಖೋಟಾ ₹200 ನೋಟುಗಳೊಂದಿಗೆ ಇಬ್ಬರ ಬಂಧನ
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಖೋಟಾ ₹200 ನೋಟುಗಳೊಂದಿಗೆ ಇಬ್ಬರ ಬಂಧನ

Share
Share

ಮೂಡಿಗೆರೆ:  ಖೋಟಾ ₹200 ಮುಖಬೆಲೆಯ ನೋಟುಗಳನ್ನು ಸ್ವಾಧೀನದಲ್ಲಿಟ್ಟುಕೊಂಡು ಚಲಾವಣೆಗೆ ಯತ್ನಿಸುತ್ತಿದ್ದ ಆರೋಪದಡಿ ಮೂಡಿಗೆರೆ ಪೊಲೀಸರು ಇಬ್ಬರನ್ನು ಬಂಧಿಸಿ ಒಟ್ಟು 90 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕರು (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಸಿಬ್ಬಂದಿ, ಪಂಚರ ಸಮಕ್ಷಮ ಮೂಡಿಗೆರೆ ಎಂ.ಜಿ.ಎಂ. ಸರ್ಕಾರಿ ಆಸ್ಪತ್ರೆ ಸಮೀಪದ ಸುಬ್ರಾಯಗೌಡರ ಹೊಸ ಲೇಔಟ್‌ನಲ್ಲಿ ದಾಳಿ ನಡೆಸಿದರು. ಈ ವೇಳೆ ಅನುಮಾನಾಸ್ಪದವಾಗಿ ಕುಳಿತಿದ್ದ ಇಬ್ಬರನ್ನು ತಪಾಸಣೆ ಮಾಡಿದಾಗ, ಅವರ ಬಳಿ ₹200 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.

ಬಂಧಿತರನ್ನು ಮೊಹಮ್ಮದ್ ಅಲಿ (36), ಈಶ್ವರಕಟ್ಟೆ ಗ್ರಾಮ, ಮೂಡು ಪೆರಾರು, ಮಂಗಳೂರು ತಾಲೂಕು ಹಾಗೂ ಹೆಚ್.ಎಸ್. ಮಹೇಶ್ (39), ನವಗ್ರಾಮ, ಹಂಡುಗುಳಿ ಗ್ರಾಮ, ಗೋಣಿಬೀಡು ಹೋಬಳಿ, ಮೂಡಿಗೆರೆ ತಾಲೂಕು ಎಂದು ಗುರುತಿಸಲಾಗಿದೆ.

ತಪಾಸಣೆಯಲ್ಲಿ ಇಬ್ಬರ ಬಳಿಯೂ ತಲಾ 45 ಖೋಟಾ ₹200 ನೋಟುಗಳು, ಒಟ್ಟು 90 ನೋಟುಗಳು (ಒಟ್ಟು ಮುಖಬೆಲೆ ₹18,000) ಪತ್ತೆಯಾಗಿವೆ. ನೋಟುಗಳನ್ನು ಪರಿಶೀಲಿಸಿದಾಗ, “Reserve Bank of India” ಎಂಬುದರ ಬದಲಿಗೆ “BESERVE RANK OF INDIA” ಎಂದು ಮುದ್ರಿತವಾಗಿರುವುದು ಕಂಡುಬಂದಿದ್ದು, ಅವು ಮೇಲ್ನೋಟಕ್ಕೆ ನಕಲಿ ನೋಟುಗಳೆಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡ ನೋಟುಗಳನ್ನು ಪಂಚರ ಸಮಕ್ಷಮ ಸೀಜ್ ಮಾಡಿ, ಆರೋಪಿಗಳನ್ನು ಬಂಧಿಸಿ ಮೂಡಿಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 179 ಮತ್ತು 180 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಖೋಟಾ ನೋಟುಗಳ ಮೂಲ ಹಾಗೂ ಅವುಗಳನ್ನು ಎಲ್ಲಿಂದ ಪಡೆದುಕೊಂಡಿದ್ದರು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Two arrested with fake ₹200 notes in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...