Home Crime News ನಿಯಂತ್ರಣ ತಪ್ಪಿ ಬಿದ್ದ ಬೈಕ್-ಮಹಿಳೆ ಸಾವು
Crime NewsHomeKadurLatest Newsnamma chikmagalur

ನಿಯಂತ್ರಣ ತಪ್ಪಿ ಬಿದ್ದ ಬೈಕ್-ಮಹಿಳೆ ಸಾವು

Share
Share

ಕಡೂರು: ರಸ್ತೆಗೆ ದಿಢೀರನೆ ಅಡ್ಡಬಂದ ಹಸುವನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿರುವ ದಾರುಣ ಘಟನೆ ಕಡೂರು-ಬೆಲಗೂರು ರಸ್ತೆಯಲ್ಲಿ ಸಂಭವಿಸಿದೆ.

ಉಡೆಗೆರೆ ಗ್ರಾಮದ ನಿವಾಸಿ ಶಾರದಮ್ಮ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಚ್ಚರಿ ಗ್ರಾಮದಲ್ಲಿದ್ದ ಕವಿತಾ ಎಂಬುವವರ ಮನೆಯಿಂದ ಉಡೆಗೆರೆ ಗ್ರಾಮಕ್ಕೆ ತೆರಳಲು ಶಾರದಮ್ಮ ಅವರು ತಮ್ಮ ಸಂಬಂಧಿ ಮಹಾಂತೇಶ್ ಎಂಬುವವರ ಹೀರೊ ಪ್ಯಾಶನ್ ಪ್ರೋ ಬೈಕ್ (KA-66-Q-9644) ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಏಕಾಏಕಿ ಹಸುವೊಂದು ಅಡ್ಡ ಬಂದಿದ್ದು, ಅದನ್ನು ತಪ್ಪಿಸುವ ಯತ್ನದಲ್ಲಿ ಬೈಕ್‌ ಪಲ್ಟಿಯಾಗಿದೆ ಎನ್ನಲಾಗಿದೆ.

ಈ ಭೀಕರ ಅಪಘಾತದಿಂದಾಗಿ ಶಾರದಮ್ಮ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತಕ್ಷಣವೇ ಸಾರ್ವಜನಿಕರ ನೆರವಿನಿಂದ ಅವರನ್ನು ಅಂಬ್ಯುಲೆನ್ಸ್ ಮೂಲಕ ಕಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆಯಲ್ಲಿ ಚಾಲಕ ಮಹಾಂತೇಶ್ ಅವರ ಬಲಕೈಗೂ ಗಾಯಗಳಾಗಿವೆ.

Woman dies after losing control of bike

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...