Home namma chikmagalur chikamagalur ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ
chikamagalurHomeLatest Newsnamma chikmagalur

ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ

Share
Share

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ಕಾಫಿ ತೋಟದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದಾಗ, ತೋಟದ ಮಾಲೀಕ ಹಾರಿಸಿದ ಗುಂಡು 4 ವರ್ಷದ ಬಾಲಕನ ತಲೆಗೆ ತಾಗಿದ ಘಟನೆ ತಾಲ್ಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಬಾಳೆಹಳ್ಳಿ ಗ್ರಾಮದ ಜಗದೀಶ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಕಾರ್ಮಿಕರು ದಿನಕ್ಕೆ ₹400 ಕೂಲಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ತೋಟದ ಮಾಲೀಕ, ‘ಸದ್ಯಕ್ಕೆ ₹350ರಂತೆ ಕೂಲಿ ಕೊಡುತ್ತೇನೆ. ಬಾಕಿ ₹50 ಅನ್ನು ನಂತರ ಕೊಡುತ್ತೇನೆ’ ಎಂದು ತಿಳಿಸಿದ್ದರು.

ಇದಕ್ಕೆ ಒಪ್ಪದ ಕಾರ್ಮಿಕರು, ಪೂರ್ಣ ಕೂಲಿ ಈಗಲೇ ನೀಡಬೇಕೆಂದು ಪಟ್ಟುಹಿಡಿದರು. ಜೊತೆಗೆ ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರನ್ನೆಲ್ಲ ಕರೆಸಿಕೊಂಡು ಮಾಲೀಕರ ಜೊತೆ ವಾಗ್ವಾದಕ್ಕೆ ಇಳಿದರು.

ಮಾತಿನ ಚಕಮಕಿ ಕೈಮೀರಿದಾಗ ಮಾಲೀಕ ಜಗದೀಶ್ ಕಾರ್ಮಿಕರನ್ನು ಹೆದರಿಸಲು ತೋಟಕೋವಿ ತಂದು ಗುಂಡು ಹಾರಿಸಿದರು. ಅದು ಹತ್ತಿರದಲ್ಲೇ ಆಟವಾಡುತ್ತಿದ್ದ ಬಾಲಕನ ತಲೆಯ ಒಂದು ಭಾಗಕ್ಕೆ ತಾಗಿತು.
ಬಾಲಕನಿಗೆ ಪಟ್ಟಣದ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ‘ಆರೋಪಿಯನ್ನು ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ‘ಪ್ರಜಾವಾಣಿ’ಗೆ ತಿಳಿಸಿದರು.

Boy injured in gunshot fired by coffee plantation owner

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...