Home namma chikmagalur chikamagalur ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಸಿ.ಟಿ. ರವಿ ವಿರುದ್ಧ ಎಸ್‌ಡಿಪಿಐ ದೂರು
chikamagalurCrime NewsHomeLatest Newsnamma chikmagalur

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಸಿ.ಟಿ. ರವಿ ವಿರುದ್ಧ ಎಸ್‌ಡಿಪಿಐ ದೂರು

Share
Share

ಚಿಕ್ಕಮಗಳೂರು: ಯೂತ್ ಫಾರ್ ನೇಷನ್ ವತಿಯಿಂದ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸುವ ವೇಳೆ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ, “ನೀಟ್ ಪರೀಕ್ಷೆಗೂ ಹಾಗೂ ಮುಲ್ಲಾಗಳಿಗೂ ಏನು ಸಂಬಂಧ, ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ, ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ, ಸಮುದಾಯವನ್ನು ಅವಹೇಳನ ಮಾಡಲಾಗಿದೆ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್ ಅವರು ಸಿ.ಟಿ. ರವಿ ವಿರುದ್ಧ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಸಿ.ಟಿ. ರವಿ ವಿರುದ್ಧ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

Derogatory statement against Muslim community – SDPI complaint against C.T. Ravi

Share

Leave a comment

Leave a Reply

Your email address will not be published. Required fields are marked *

Don't Miss

ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೬-೨೭ನೇ ಸಾಲಿನ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ...

ಗಣತಿ ನಮೂನೆ ಸಿಗದಿದ್ದರೆ `1950’ಗೆ ಕರೆ ಮಾಡಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಯಶಸ್ವಿಯಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಒಂದು ವೇಳೆ ಯಾರಿಗಾದರೂ ಗಣತಿ ನಮೂನೆ ಲಭ್ಯವಾಗದಿದ್ದಲ್ಲಿ ತಕ್ಷಣವೇ...

Related Articles

ಮುಂದುವರಿದ ಟಿ.ಡಿ.ರಾಜೇಗೌಡ-ಗೊಂದಲದಲ್ಲಿ ಗಾಯಿತ್ರಿ ?

ಚಿಕ್ಕಮಗಳೂರು: ಶಾಸಕ ಟಿ.ಡಿ.ರಾಜೇಗೌಡ v/s ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಧ್ಯೆ ನಡೆದಿರುವ ಶಾಸಕ ಸ್ಥಾನನ ಪೈಪೋಟಿಯಲ್ಲಿ...

 ಲಿಂಗತ್ವ ಅಲ್ಪಸಂಖ್ಯಾತರಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ

ಚಿಕ್ಕಮಗಳೂರು:  ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ...

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ

ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ...

ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪ್ರತಿಭಟನೆ

ಚಿಕ್ಕಮಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪ್ರಹಾರವನ್ನು ಖಂಡಿಸಿರುವ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್...