ಅಜ್ಜಂಪುರ: ಅಜ್ಜಂಪುರ–ಬೀರೂರು ರಸ್ತೆಯ ನಾಗಮಂಗಲ ಸಮೀಪ ಭಾನುವಾರ ಸಂಜೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚನ್ನಾಪುರ ನಿವಾಸಿ ಹಾಗೂ ಮೆಕಾನಿಕ್ ಆಗಿದ್ದ ಆನಂದ್ ಮೃತಪಟ್ಟಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ನಾಗಮಂಗಲದ ಸಮೀಪ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆನಂದ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರನಿಗೂ ಗಾಯಗಳಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
Mechanic dies in horrific accident between bikes
Leave a comment