Home namma chikmagalur Banagalore ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ
BanagaloreHomeLatest Newsnamma chikmagalur

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

Share
Share

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಮನೆಗೆ ಹೋದ ಕರಿಯಪ್ಪ ಅವರು ಎಷ್ಟು ಹೊತ್ತಾದರೂ ಮರಳಿ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಮೀಪದ ಜಮೀನಿನ ಬಳಿ ಇದ್ದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಕರಿಯಪ್ಪ ಓಡಾಡುತ್ತಿರುವ ದೃಶ್ಯ ಪತ್ತೆಯಾಗಿದೆ. ಅದರ ಬೆನ್ನಲ್ಲೇ ಕೆಲವೇ ಗಂಟೆಗಳ ನಂತರ ಅದೇ ಮಾರ್ಗದಲ್ಲಿ ಮತ್ತೋರ್ವ ವ್ಯಕ್ತಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಆ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಇಡೀ ಪ್ರಕರಣದ ಸತ್ಯಾಂಶ ಹೊರಬಿದ್ದಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಯಗಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬೇಟೆಗಾರರು ತಂತಿ ಹಾಕಿದ್ದ ಜಾಗದಲ್ಲೇ ಕರಿಯಪ್ಪ ಮೃತಪಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಶವ ಹೂತು ಹಾಕಿರುವ ಸ್ಥಳಕ್ಕೆ ತರೀಕೆರೆ ಎಸಿ (ಸಹಾಯಕ ಆಯುಕ್ತರು) ಅವರು ಇಂದು ಭೇಟಿ ನೀಡಲಿದ್ದು, ಅವರ ಸಮ್ಮುಖದಲ್ಲಿ ಹೂತಿರುವ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಅಹಿತಕರ ಘಟನೆ ನಡೆಯದಂತೆ ಮತ್ತು ಸಾಕ್ಷ್ಯಗಳಿಗೆ ಧಕ್ಕೆಯಾಗದಂತೆ ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Man dies after being hit by electric wire near Yagati

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...