Home namma chikmagalur chikamagalur ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು
chikamagalurCrime NewsHomeLatest Newsnamma chikmagalur

ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು

Share
Share

ಚಿಕ್ಕಮಗಳೂರು: ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ಬಸವನಕೂಡಿ ಈಶ್ವರಹಳ್ಳಿ ಗ್ರಾಮದ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೋಮಭೋವಿ ಎಂಬುವರಿಗೆ ಪೆದ್ದ ಭೋವಿ ಎಂಬುವರು ನಂಬರಿನ ಬೈಕ್‌ನಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿ ಹೊಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸೋಮಭೋವಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ತಲೆ ಹಾಗೂ ಮೈಕೈಗೆ ತೀವ್ರ ಗಾಯಗೊಂಡಿದ್ದ ಅವರನ್ನು ತಕ್ಷಣ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ, ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜುಲೈ 27ರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ತೇಜಲಕ್ಷ್ಮಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ, ಅಜ್ಜಂಪುರ ತಾಲೂಕಿನ ನಾಗವಂಗಲ ಗೇಟ್‌ನ ಫೈ ಓವರ್ ಮೇಲೆ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಆನಂದ (43) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನಂದ್ ಅವರು ತಮ್ಮ ಡಿಸ್ಕವರ್ ಬೈಕ್‌ನಲ್ಲಿ (KA 18 X 7780) ಪತ್ನಿ ಸುಧಾ ಅವರೊಂದಿಗೆ ಸಂಚರಿಸುತ್ತಿದ್ದಾಗ, ಎದುರಿನಿಂದ ಅತಿವೇಗವಾಗಿ ಬಂದ ನಾಗಪ್ಪ ಎಂಬುವವರ KA 66 L 5916 ನಂಬರಿನ ಸ್ಕೂಟಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಆನಂದ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಅವರ ಪತ್ನಿ ಸುಧಾ ಹಾಗೂ ಸ್ಕೂಟಿಯಲ್ಲಿದ್ದ ನೇತ್ರಾವತಿ ಎಂಬುವರಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Two killed in separate road accidents

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...