Home namma chikmagalur chikamagalur ಸೊಪ್ಪು ಕಡಿಯಲು ಮರ ಹತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು
chikamagalurCrime NewsHomeLatest Newsnamma chikmagalur

ಸೊಪ್ಪು ಕಡಿಯಲು ಮರ ಹತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು

Share
Share

ಎನ್.ಆ‌ರ್. ಪುರ: ಸೊಪ್ಪು ಕಡಿಯಲು ಮರ ಹತ್ತಿದ್ದ ವೇಳೆ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಎನ್.ಆ‌ರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಡಿಗೇಶ್ವರದ ಆಡುವಳ್ಳಿ ಗ್ರಾಮದ ನಿವಾಸಿ ಹರೀಶ್ (47) ಮೃತಪಟ್ಟ ದುರ್ದೈವಿ. ಹರೀಶ್ ಅವರ ಆರೋಗ್ಯ ಸರಿಯಿಲ್ಲದಿದ್ದರೂ ಗಿರಿಜಮ್ಮ ಎಂಬುವವರು ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಮರ ಹತ್ತಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಕಾಡಿನಲ್ಲಿ ಮರ ಹತ್ತಿ ಸೊಪ್ಪು ಕಡಿಯುತ್ತಿದ್ದಾಗ ಆಕಸ್ಮಿಕವಾಗಿ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಅನಾರೋಗ್ಯದ ನಡುವೆಯೂ ಒತ್ತಾಯಪೂರ್ವಕವಾಗಿ ಕರೆದೊಯ್ದು ಈ ದುರಂತಕ್ಕೆ ಕಾರಣರಾದ ಗಿರಿಜಮ್ಮ ಎಂಬುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮೃತ ಹರೀಶ್ ಅವರ ಪತ್ನಿ ಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Man falls to death after climbing tree to cut greens

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...