ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (KSMCL) ಸಂಸ್ಥೆಯ ವತಿಯಿಂದ ಚಿಕ್ಕಮಗಳೂರಿನ ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದಲ್ಲಿ ನೂತನ ಗೋಶೆಡ್ ನಿರ್ಮಿಸಿ ಹಸ್ತಾಂತರಿಸಲಾಗಿದೆ.
ಈ ನೂತನ ಗೋಶೆಡ್ ನಿರ್ಮಾಣದಿಂದ ಗೋಶಾಲೆಯಲ್ಲಿರುವ ಗೋವುಗಳಿಗೆ ಸುರಕ್ಷಿತ, ವಿಶಾಲ ಹಾಗೂ ಸುಸಜ್ಜಿತ ಆಶ್ರಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಗೋಸಂರಕ್ಷಣಾ ಕಾರ್ಯಕ್ಕೆ ಮತ್ತಷ್ಟು ಬಲ ದೊರೆತಿದೆ ಎಂದು ಗೋಶಾಲೆಯ ಸದಸ್ಯರು ತಿಳಿಸಿದ್ದಾರೆ.
ಈ ಸಮಾಜಮುಖಿ ಯೋಜನೆಗೆ ಸಹಕಾರ ನೀಡಿದ KSMCL ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಿ. ಎಸ್. ಪಾಟೀಲ್, ರೋಣ ಕ್ಷೇತ್ರದ ಶಾಸಕರು, ದಿವಂಗತ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ ಬೀಳಗಿ ಹಾಗೂ ಸಂಸ್ಥೆಯ ಕಾರ್ಯನಿರ್ವಹಣಾ ಕಾರ್ಯದರ್ಶಿ ಶ್ರೀ ವಿಶ್ವನಾಥ್ ಹಿರೇಮಠ ಅವರ ಸೇವೆಯನ್ನು ಶಂಕರ ಭಾರತಿ ಗೋಶಾಲೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸ್ಮರಿಸಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ಗೋಸಂರಕ್ಷಣೆ ಮತ್ತು ಸಮಾಜಮುಖಿ ಸೇವಾ ಕಾರ್ಯಗಳಿಗೆ KSMCL ನೀಡಿರುವ ಈ ರೀತಿಯ ಬೆಂಬಲ ಇತರ ಸಂಸ್ಥೆಗಳಿಗೂ ಮಾದರಿಯಾಗಲಿ ಎಂಬ ಆಶಯವನ್ನು ಗೋಶಾಲೆಯ ಆಡಳಿತ ಮಂಡಳಿ ವ್ಯಕ್ತಪಡಿಸಿದೆ.
Construction of a new cowshed at a cost of ₹10 lakh for Shankar Bharathi Goshala
Leave a comment