Home namma chikmagalur chikamagalur ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ
chikamagalurHomeLatest Newsnamma chikmagalur

ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ

Share
Share

ಚಿಕ್ಕಮಗಳೂರು: ರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ನ್ಯಾಯಾಲಯದ ತೀರ್ಪಿಗೆ ಗೌರವ ಸೂಚಿಸಿ, ತಮ್ಮ ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಶನಿವಾರ ಬಿಡುಗಡೆ ಮಾಡಿದ ಭಾವನಾತ್ಮಕ ಪತ್ರದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆದೇಶದಂತೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲಾಗಿದ್ದು, ಅದೇ ನಿಯಮದ ಅನ್ವಯ ನಡೆದ ಚುನಾವಣೆಯಲ್ಲಿ ತಾವು ಗೆಲುವು ಸಾಧಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಇದೀಗ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಅನರ್ಹ ಎಂದು ನ್ಯಾಯಾಲಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಆ ತೀರ್ಪಿಗೆ ತಲೆಬಾಗುವುದಾಗಿ ಹೇಳಿದ್ದಾರೆ.

1997ರಿಂದಲೂ ದೇಶಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾ ಬಂದಿದ್ದಾರೆ. ತಾವು ಯಾವುದೇ ಚುನಾವಣಾ ಅಕ್ರಮ ಎಸಗಿಲ್ಲ. ತಮ್ಮ ಗೆಲುವಿನ ಅಂತರ ಕಡಿಮೆ ಇದ್ದ ಕಾರಣ ಪ್ರತಿಸ್ಪರ್ಧಿ ಅಭ್ಯರ್ಥಿ ನ್ಯಾಯಾಲಯದ ಮೊರೆ ಹೋದ ಪರಿಣಾಮ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಉಪಸಭಾಪತಿಯಾಗಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸಿದ್ದು, ಭ್ರಷ್ಟಾಚಾರ ಹಾಗೂ ದ್ವೇಷ ರಾಜಕಾರಣದಿಂದ ದೂರವಿದ್ದು ಸಾರ್ವಜನಿಕ ಸೇವೆಗೆ ಆದ್ಯತೆ ನೀಡಿದ್ದೇನೆ ಎಂದು ಪ್ರಾಣೇಶ್ ಹೇಳಿದ್ದಾರೆ.

ತಮ್ಮ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಕಾರ್ಯಕರ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಹಿಂದಿನ ಹಾಗೂ ಹಾಲಿ ಸರ್ಕಾರದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ವಿಧಾನ ಪರಿಷತ್ ಸಭಾಪತಿ, ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೂ ಧನ್ಯವಾದ ಅರ್ಪಿಸಿದ್ದಾರೆ.

“ಈ ತೀರ್ಪಿನಿಂದ ಯಾರೂ ಎದೆಗುಂದಬೇಕಿಲ್ಲ. ನಾನು ಅಧಿಕಾರವನ್ನು ಕಳೆದುಕೊಂಡಿರಬಹುದು. ಆದರೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರೊಂದಿಗೆ ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ನೂತನವಾಗಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಶುಭಾಶಯ ಕೋರಿರುವ ಎಂ.ಕೆ. ಪ್ರಾಣೇಶ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಲಿ ಎಂದು ಹಾರೈಸಿದ್ದಾರೆ.

M.K. Pranesh’s emotional statement on the court verdict

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...