Home namma chikmagalur chikamagalur ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯದ ಉದ್ದಗಲ ಕ್ಕೂ ಬರಗಾಲದ ಛಾಯೆ ಆವರಿಸಿಕೊಂಡಿದೆ. ರೈತಾಪಿ ವರ್ಗ ಬೆಳೆಗಳಿಗೆ ನೀರಿಲ್ಲದೇ ಕಂಗಾಲಾಗಿದ್ದು ಇದ ರಿಂದ ಸಾಲ ಪಡೆದಿರುವ ರೈತರು ತೀರಿಸಲಾಗದೇ ವಿಷ ಕುಡಿಯುವ ಹಂತಕ್ಕೆ ತಲುಪಿದ್ದಾರೆ ಎಂದರು.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕನಿಷ್ಟ ಅರ್ಧ ಅಥವಾ ಒಂದು ಇಂಚು ಸುರಿಯುವ ಮಳೆಯು, ಇದೀಗ ಸೆನ್ಸ್ ಲೆಕ್ಕದಲ್ಲಿ ಸುರಿಯತ್ತಿದೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಜನರ ಹಿತ ಕಾಯುವ ದೃಷ್ಟಿಯಿಂದ ನಿರ್ಣಯ ಕೈಗೊಳ್ಳದಿದ್ದಲ್ಲಿ ಅಧಿಕಾರ ತ್ಯಜಿಸಿ, ಕನ್ನಡಪರ ಸಂಘಟನೆಗಳಿಗೆ ರಾಜ್ಯ ವನ್ನು ಕಾಪಾಡುವ ಶಕ್ತಿಯಿದೆ ಎಂದರು.

ತಮಿಳುನಾಡು ಕಾವೇರಿ ನೀರನ್ನು ಮೇಕೆದಾಟಿಗೆ ಬಳಸುತ್ತಿಲ್ಲ. ಕೆಆರ್‌ಎಸ್ ಬಹುಪಾಲು ನೀರನ್ನು ಸ ಮುದ್ರದ ಪಾಲು ಮಾಡುತ್ತಿದ್ದು ಅಲ್ಲಿನ ಸರ್ಕಾರ ಜನಪರ ಕಾಳಜಿಯಿದ್ದಲ್ಲಿ ಅಣೆಕಟ್ಟು ನಿರ್ಮಿಸಿ ನೀರು ಸಂ ಗ್ರಹಿಸಬಹುದು. ಆದರೆ ತಮಿಳುನಾಡು ಸರ್ಕಾರ ಈ ಬಗ್ಗೆ ಚಿಂತಿಸದೇ ಪ್ರತಿಸಾರಿ ನೀರು ಕೇಳುವುದು ಸರಿ ಯಾದ ಕ್ರಮವಲ್ಲ ಎಂದರು.

ರಾಜ್ಯವನ್ನಾಳಿದ ಎರಡು ರಾಷ್ಟ್ರೀಯ ಪಕ್ಷಗಳು ಕಾವೇರಿ ವಿಚಾರದಲ್ಲಿ ಎಂದಿಗೂ ರೈತರ ಹಿತ ಕಾಪಾ ಡುತ್ತಿಲ್ಲ. ಕೇವಲ ಮತಬ್ಯಾಂಕ್‌ಗಾಗಿ ರೈತರನ್ನು ಬಳಸಿಕೊಂಡು, ನೀರಿನ ವಿಷಯದಲ್ಲಿ ದ್ರೋಹವೆಸಗುತ್ತಿದೆ. ಆ ನಿಟ್ಟಿನಲ್ಲಿ ಕನ್ನಡಸೇನೆ ನಾಡಿನ ಜಲ, ಭಾಷೆಯನ್ನು ಕಾಪಾಡುವ ಆಡಳಿತದೊಂದಿಗೆ ಸದಾ ಜೊತೆಗಿರಲಿದೆ ಎಂದು ತಿಳಿಸಿದರು.

ರಾಜ್ಯಸರ್ಕಾರ ಕೂಡಲೇ ಬರಗಾಲ, ರೈತರ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದು ಕಾವೇರಿ ನೀರು ಹರಿಸದಂತೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿ ನೀರನ್ನು ಹರಿಬಿಟ್ಟಲ್ಲಿ ಕನ್ನಡಪರ ಸಂಘಟನೆಗಳು ಬೃಹತ್ ಮಟ್ಟದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕನ್ನಡಸೇನೆ ಜಿಲ್ಲಾ ವಕ್ತಾರರಾದ ಹುಣಸೇಮಕ್ಕಿ ಲಕ್ಷ್ಮಣ್, ಕಳವಾಸೆ ರವಿ, ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ನಗರಾಧ್ಯಕ್ಷ ಸತೀಶ್, ಮುಖಂಡರುಗಳಾದ ಇಂದ್ರ, ಮೇಘ, ಉಷಾ, ದಾಕ್ಷಾಯಣಿ, ಅನ್ವರ್, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

Protest demanding that Cauvery water not be released to Tamil Nadu

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...