Home namma chikmagalur chikamagalur ನದಿ ಪಾತ್ರದ ಸುತ್ತಮುತ್ತಲಿನ ಅಡಕೆ ತೋಟ ನೀರುಪಾಲು
chikamagalurHomeLatest Newsnamma chikmagalur

ನದಿ ಪಾತ್ರದ ಸುತ್ತಮುತ್ತಲಿನ ಅಡಕೆ ತೋಟ ನೀರುಪಾಲು

Share
Share

ಎನ್.ಆ‌ರ್.ಪುರ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಭದ್ರಾ ನದಿ ಭೋರ್ಗರೆಯುತ್ತಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹೊಳೆಬಾಗಿಲು ಭಾಗದಲ್ಲಿ ಮಳೆಯ ಆರ್ಭಟಕ್ಕೆ ನದಿಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ ಸುತ್ತಮುತ್ತಲಿನ ಅಡಕೆ ತೋಟ ಹಾಗೂ ಗದ್ದೆಗಳು ನೀರುಪಾಲಾಗಿವೆ.

ನದಿಯ ಪ್ರಚಂಡ ಹರಿವಿನಿಂದಾಗಿ ಹೊಳೆಬಾಗಿಲು ಮತ್ತು ಸುತ್ತಮುತ್ತಲಿನ ಗ್ರಾಮಗಳ ಕೃಷಿ ಭೂಮಿಗೆ ನೀರು ಆವರಿಸಿಕೊಂಡಿದ್ದು, ಬೆಳೆ ಸಂಪೂರ್ಣ ಮುಳುಗಡೆಯಾಗಿದೆ. ದಿಢೀರ್ ಎದುರಾದ ಈ ಜಲಾವೃತ ಸ್ಥಿತಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗುವ ಭೀತಿ ಎದುರಾಗಿದ್ದು, ನದಿ ಪಾತ್ರದ ರೈತರು ಸಂಪೂರ್ಣವಾಗಿ ಕಂಗಾಲಾಗಿದ್ದಾರೆ.

 ತಡೆಗೋಡೆ ಕುಸಿತ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ರಸ್ತೆ ಪಕ್ಕದ ತಡೆಗೋಡೆಯೊಂದು ಕುಸಿದು ಬಿದ್ದಿರು ಘಟನೆ ಕಳಸ ದಲ್ಲಿ ನಡೆದಿದೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬೇಡಕ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ತಡೆಗೋಡೆ ಕುಸಿದಿರುವುದರಿಂದ ಸ್ಥಳೀಯ ಮೊಹಮ್ಮದ್ ಎಂಬುವವರ ಕುಟುಂಬ ತೀವ್ರ ಆತಂಕದಲ್ಲಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ.

ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಾದರೆ ತಡೆಗೋಡೆ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನವೇ ಕುಸಿದಿರುವ ತಡೆಗೋಡೆಯನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.

The watershed around the riverbed is a wetland.

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...