Home namma chikmagalur chikamagalur ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು
chikamagalurHomeLatest Newsnamma chikmagalur

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

Share
Share

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ ಸುಸೂತ್ರವಾಗಿ ನಡೆಯಿತು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ೭,೦೯೧ ಅಭ್ಯರ್ಥಿಗಳ ಪೈಕಿ ೬,೬೪೦ ಮಂದಿ ಹಾಜರಾಗಿದ್ದು, ೪೫೧ ಅಭ್ಯರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ಚಿಕ್ಕಮಗಳೂರಿನಲ್ಲಿ ೧೦, ಮೂಡಿಗೆರೆಯಲ್ಲಿ ೩ ಹಾಗೂ ಕಡೂರಿನಲ್ಲಿ ೩ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಬೆಳಗ್ಗೆ ೧೦.೩೦ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಪರೀಕ್ಷೆ ನಡೆಯಿತು. ಪರೀಕ್ಷೆಯ ಪೂರ್ವ ಸೂಚನೆಯಂತೆ ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಫೇಸ್ ರೆಕಗ್ನಿಷನ್ ವ್ಯವಸ್ಥೆ ಹಾಗೂ ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಿದ ಬಳಿಕವೇ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.

ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಉತ್ತರ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸಲು ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದರು. ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನೆಟ್‌ವರ್ಕ್ ಜಾಮರ್ ಅಳವಡಿಸಲಾಗಿದ್ದು, ಪರೀಕ್ಷಾ ಕೊಠಡಿಗಳು ಹಾಗೂ ಆವರಣವನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾವಹಿಸಲಾಯಿತು.

ಇದಲ್ಲದೆ, ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಯಾವುದೇ ಲೋಪದೋಷ ಅಥವಾ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ತಿಳಿಸಿದ್ದಾರೆ.

451 candidates absent from police constable written exam

 

Share

Leave a comment

Leave a Reply

Your email address will not be published. Required fields are marked *

Don't Miss

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಕೆ.ಪಿ.ಸಿ.ಸಿ....

ರಾಜ್ಯ ಸರ್ಕಾರ ಜನ ಸಾಮಾನ್ಯರ ಜೀವನದ ಜೊತೆ ಚೆಲ್ಲಾಟ

ಕೊಪ್ಪ: ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ಪಡೆಯಲು ರಾಜ್ಯ ಸರ್ಕಾತ ಗರಿ? ೩೨ ಸಾವಿರ ರೂ. ಆದಾಯಮಿತಿ ನಿಗದಿಪಡಿಸಿರುವುದನ್ನು ಖಂಡಿಸಿ ಶೃಂಗೇರಿ ಕ್ಷೇತ್ರ ಜೆಡಿಎಸ್ ಸಮಿತಿಯಿಂದ ಪಟ್ಟಣದ...

Related Articles

ಕೊನೆ ಕ್ಷಣದಲ್ಲಿ ಗಾಯಿತ್ರಿಗೆ ತಪ್ಪಿದ ಮಂತ್ರಿ ಸ್ಥಾನ

ಚಿಕ್ಕಮಗಳೂರು: ಜಿಲ್ಲೆಯ ಐದು ಜನ ಶಾಸಕರಿಗೆ ಮಂತ್ರಿ ಪದವಿ ದೊರೆಯದೆ ಕೊನೆ ಕ್ಷಣದಲ್ಲಿ ಫಿಲ್ಮ್ ನಲ್ಲಿ...

ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ...

ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ...